ಕುಮಟಾ: ಅಪರ ಆಯುಕ್ತಾಲಯ ಸಾರ್ವಜನಿಕ ಶಿಕ್ಷಣ ಇಲಾಖೆ ಧಾರವಾಡ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಕುಮಟಾ ಹಾಗೂ ಡಾ. ಎಚ್. ಎಫ್. ಕಟ್ಟೀಮನಿ ಪ್ರೌಢಶಿಕ್ಷಣ ಪ್ರತಿಷ್ಠಾನ ಇವರ ಆಶ್ರಯದಲ್ಲಿ ಕುಮಟಾದ ಮಹಾತ್ಮಾ ಗಾಂಧಿ ಪ್ರೌಢಶಾಲೆ ಚಿತ್ರಿಗಿಯಲ್ಲಿ ನಡೆದ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ, 2017-18ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲೂಕಿನಲ್ಲಿಯೇ ವಿಷಯವಾರು ಗರಿಷ್ಠ ಶೇಕಡಾವಾರು ಸರಾಸರಿ ಅಂಕಗಳನ್ನು ದಾಖಲಿಸಿದ ಕುಮಟಾದ ಪ್ರತಿಷ್ಠಿತ ಕೊಂಕಣ ಎಜ್ಯುಕೇಶನ್ ಸಿ.ವಿ.ಎಸ್.ಕೆ ಪ್ರೌಢಶಾಲೆಯ ನಾಲ್ಕು ವಿಷಯ ಶಿಕ್ಷಕರನ್ನು ವಿಧಾನ ಪರಿಷತ್ ಸದಸ್ಯರಾದ ಶ್ರೀ ಬಸವರಾಜ ಹೊರಟ್ಟಿಯವರು ಗೌರವಿಸಿ ಸನ್ಮಾನಿಸಿದರು.
ವಿಷಯವಾರು ಬೋಧನೆಯ ಅನುಸಾರ ಇಂಗ್ಲೀಷ್ ವಿಷಯದಲ್ಲಿ ಶ್ರೀಮತಿ ವಿನಯಾ ನಾಯಕ ಶೇ.92.48, ಸಮಾಜ ವಿಜ್ಞಾನ ವಿಷಯದಲ್ಲಿ ಶ್ರೀ ಪ್ರಕಾಶ ಗಾವಡಿ ಶೇ.91.41, ಗಣ ತ ವಿಷಯದಲ್ಲಿ ಶ್ರೀ ರಾಜೇಶ ಎಚ್.ಜಿ ಶೇ.83.35, ಹಾಗೂ ವಿಜ್ಞಾನ ವಿಷಯದಲ್ಲಿ ಭಾಸ್ಕರ ಹೆಗಡೆ ಶೇ.74.1 ಸರಾಸರಿ ಶೇಕಡಾವಾರು ಅಂಕ ಗಳಿಸಲು ಶ್ರಮಿಸಿದ ಈ ಶಿಕ್ಷಕರುಗಳನ್ನು ಗೌರವಿಸಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿನ ಒಟ್ಟೂ ಆರು ವಿಷಯಗಳಲ್ಲಿ ನಾಲ್ಕರಲ್ಲಿ ಕುಮಟಾದ ಸಿ.ವಿ.ಎಸ್.ಕೆ ಪ್ರೌಢಶಾಲೆಯ ಈ ಶಿಕ್ಷಕರು ತಾಲೂಕಿನಲ್ಲಿಯೇ ಉತ್ತಮ ಬೋಧನಾ ಸಾಧನೆಗಾಗಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈಗಾಗಲೇ ಈ ಪ್ರೌಢಶಾಲೆಯು ಎಸ್.ಎಸ್.ಎಲ್.ಸಿ ಪರೀಕ್ಷಾ ಸಾಧನೆಯಲ್ಲಿ ರಾಜ್ಯದಲ್ಲಿಯೇ ಮೊದಲ 10 ಅಗ್ರಗಣ್ಯ ಶಾಲೆಗಳ ಪಟ್ಟಿಯಲ್ಲಿ ಸ್ಥಾನವನ್ನು ಅಲಂಕರಿಸಿದ್ದು, ಈ ಸಾಧನೆಯು ಶಾಲೆಯ ಶಿಕ್ಷಕರುಗಳ ಬೋಧನಾ ಸಾಮಥ್ರ್ಯ ಹಾಗೂ ಕೌಶಲ್ಯಕ್ಕೆ ಎತ್ತಿ ಹಿಡಿದ ಕನ್ನಡಿಯಾಗಿದೆ.
ಈ ಮಹತ್ತರ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಮುಖ್ಯಾಧ್ಯಾಪಕಿ ಸುಮಾ ಪ್ರಭು, ಶೈಕ್ಷಣ ಕ ಸಲಹೆಗಾರರಾದ ಶ್ರೀ ಆರ್.ಎಚ್.ದೇಶಭಂಡಾರಿ ಹಾಗೂ ಎಲ್ಲಾ ಶಿಕ್ಷಕ-ಶಿಕ್ಷಕಿಯರು ಹರ್ಷ ವ್ಯಕ್ತಪಡಿಸಿ, ಅಭಿನಂದಿಸಿದ್ದಾರೆ.