ಬೆಂಗಳೂರು: ಯುವಕನೊಬ್ಬ ಮೆಟ್ರೋ ರೈಲು ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಕಾಲೇಜು ಮೆಟ್ರೋ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ನಡೆದಿದೆ ಎಂದು ತಿಳಿದುಬಂದಿದೆ.
ಇಂದು ಬೆಳಿಗ್ಗೆಯಿಂದಲೇ ರೈಲ್ವೆ ನಿಲ್ದಾಣದಲ್ಲಿ ಕುಳಿತಿದ್ದ ಯುವಕವನ್ನು ಕಂಡು ಅಲ್ಲಿದ್ದವರು ವಿಚಾರಿಸಿದ್ದಾರೆ. ಆದರೆ, ಈತ ತನ್ನ ಸಂಬಂಧಿಕಾರಿಗಾಗಿ ಕಾಯುತ್ತಿರುವುದಾಗಿ ಹೇಳಿದ್ದ ಎನ್ನಲಾಗಿದೆ.
ಆದರೆ, ಕೆಲ ಸಮಯದ ಬಳಿಕ ಮೆಟ್ರೋ ರೈಲು ಬರುತ್ತಿದ್ದಂತೆಯೇ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ ಟ್ರ್ಯಾಕ್‌ನ 750 ವೋಲ್ಟೇಜ್ ವಿದ್ಯುತ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಅದೃಷ್ಟವಶಾತ್ ವೇಣು ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ.
ತಲೆಗೆ ಬಲವಾದ ಪೆಟ್ಟಾಗಿದ್ದು, ಯುವಕನನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.