ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2019ನೇ ಸಾಲಿನ ಸಿಇಟಿ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ ಎಂದು ತಿಳಿದುಬಂದಿದೆ.

ಈ ಬಾರಿಯ ಸಿಇಟಿ ಪರೀಕ್ಷೆಗಳು ಏಪ್ರಿಲ್ ತಿಂಗಳಿನಲ್ಲಿ ನಡೆಯಲಿದ್ದು, ಏಪ್ರಿಲ್​​ 23ರ ಬೆಳಗ್ಗೆ 10.30 ರಿಂದ 11.50ರವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30 ರಿಂದ 03.50 ರವರೆಗೆ ಗಣಿತ ಪರೀಕ್ಷೆ ಮತ್ತು ಏ. 24ರ ಬೆಳಗ್ಗೆ 10.30 ರಿಂದ 11.50ರ ವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30 ರಿಂದ 03.50 ರವರೆಗೆ ರಸಾಯನ ಶಾಸ್ತ್ರ ಪರೀಕ್ಷೆ ನಡೆಯಲಿವೆ. ಹೊರನಾಡು ಮತ್ತು ಗಡಿನಾಡಿನ ಕನ್ನಡಿಗರಿಗೆ  25ರಂದು ಕನ್ನಡ ಭಾಷಾ ಪರೀಕ್ಷೆ ಬೆಂಗಳೂರು ಕೇಂದ್ರದಲ್ಲಿ ಮಾತ್ರ ನಡೆಯಲಿದೆ.

RELATED ARTICLES  ಗ್ರಹಣಕಾಲದಲ್ಲಿಯೂ ಗೋಕರ್ಣ ಮಹಾಬಲೇಶ್ವರನ ದರ್ಶನ

ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಈ ವರ್ಷದಿಂದ ಆನ್‌ಲೈನ್ ಮೂಲಕ ಸಿಇಟಿ ಪರೀಕ್ಷೆ ನಡೆಸಲಾಗುತ್ತದೆ ಎಂದು ಹೇಳಿದ್ದರು. ಆದರೆ, ಆನ್‌ಲೈನ್ ಮೂಲಕ ಪರೀಕ್ಷೆಗಳನ್ನು ನಡೆಸಲು ಅಗತ್ಯವಾದ ಸೌಲಭ್ಯಗಳು ಇಲ್ಲ. ಈ ಹಿನ್ನೆಲೆಯಲ್ಲಿ ಈ ಬಾರಿಯ ಸಿಇಟಿ ಪರೀಕ್ಷೆಯೂ ಹಳೇ ಮಾದರಿಯಲ್ಲೇ ನಡೆಯಲಿದೆ ಎಂದು ವರದಿಯಾಗಿದೆ.

RELATED ARTICLES  ಭಾರತೀಯ ರೈಲ್ವೆ ಇಲಾಖೆ ಅಧೀನದ ರಿತೇಸ್ ಲಿಮಿಟೆಡ್ ನಲ್ಲಿ ನೇಮಕಾತಿ..