/* Style Definitions */ table.MsoNormalTable {mso-style-name:”Table Normal”; mso-tstyle-rowband-size:0; mso-tstyle-colband-size:0; mso-style-noshow:yes; mso-style-priority:99; mso-style-qformat:yes; mso-style-parent:””; mso-padding-alt:0in 5.4pt 0in 5.4pt; mso-para-margin-top:0in; mso-para-margin-right:0in; mso-para-margin-bottom:10.0pt; mso-para-margin-left:0in; line-height:115%; mso-pagination:widow-orphan; font-size:11.0pt; font-family:”Calibri”,”sans-serif”; mso-ascii-font-family:Calibri; mso-ascii-theme-font:minor-latin; mso-hansi-font-family:Calibri; mso-hansi-theme-font:minor-latin; mso-bidi-font-family:”Times New Roman”; mso-bidi-theme-font:minor-bidi;}
ಕೃಷಿತಜ್ಞರಾದ ನಾಡೋಜ ಎಲ್. ನಾರಾಯಣ ರೆಡ್ಡಿ ನಿಧನ.
ದೊಡ್ಡಬಳ್ಳಾಪುರ : ಸಾವಯವ ಕೃಷಿಕ, ನಾಡೋಜ ಎಲ್. ನಾರಾಯಣರೆಡ್ಡಿ ತಡರಾತ್ರಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಸ್ವಗ್ರಾಮ ಮರಳೇಹಳ್ಳಿಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾವಯವ ಕೃಷಿಯ ಬಗ್ಗೆ ಉಪನ್ಯಾಸ ನೀಡಿದ್ದ ನಾರಾಯಣ ರೆಡ್ಡಿ ಅವರು, ಕೃಷಿ ಕ್ಷೇತ್ರದ ಸಾಧನೆಗಾಗಿ ಹಂಪಿ ಕನ್ನಡ ವಿವಿಯಿಂದ ನಾಡೋಜ ಪ್ರಶಸ್ತಿ ಪುರಸ್ಕೃತರಾಗಿದ್ದರು. ದೊಡ್ಡಬಳ್ಳಾಪುರ ಸಮೀಪದ ಸೋರಹುಣಸೆ ಗ್ರಾಮದಲ್ಲಿ ನೆಲೆಸಿರುವ ಇವರು ಸಾವಯವ ಕೃಷಿಯ ಸಾಧನೆಗಾಗಿ ‘ನಾಡೋಜ ಪ್ರಶಸ್ತಿಗೆ’ ಪಾತ್ರರಾಗಿದ್ದಾರೆ. ಕೃಷಿರಂಗದಲ್ಲಿ ಮಾರ್ಗದರ್ಶಕರಾಗಿದ್ದರು ಇವರಿಗೆ 80 ವರ್ಷ ವಯಸ್ಸಾಗಿತ್ತು. ಇಂದು ಮಧ್ಯಾಹ್ನ ಬೆಂಗಳೂರಿನ ವರ್ತೂರು ಬಳಿಯ ತರಹುಳಿಸೆಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬ ಸದಸ್ಯರು ಹೇಳಿದ್ದಾರೆ ಎಂದು ವರದಿಯಾಗಿದೆ.