ಮಂಗಳೂರು: ಮಂಗಳೂರು ನಗರದಲ್ಲಿನ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಗಾಂಜಾ ನೀಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಹಾಗೂ ಎಕಾನಾಮಿಕ್ ಮತ್ತು ನಾರ್ಕೋಟಿಕ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳೂರು ನಗರದ ಮೋರ್ಗನ್ ಗೇಟ್ ಬಳಿಯ ಮೈದಾನದಲ್ಲಿ ಗಾಂಜಾವನ್ನು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದಾರೆ ಹಾಗೂ ಸೇವನೆ ಮಾಡುತ್ತಿದ್ದಾರೆಂಬ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಹಾಗೂ ಎಕಾನಾಮಿಕ್ ಮತ್ತು ನಾರ್ಕೋಟಿಕ್ ಕ್ರೈಂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದರು. ಖಚಿತ ಮಾಹಿತಿ ಮೇರೆಗೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿ 8 ಮಂದಿ ಯುವಕರನ್ನು ಗಾಂಜಾ ಸಮೇತ ಬಂಧಿಸಿದ್ದಾರೆ ಎನ್ನಲಾಗಿದೆ.
ದಾಳಿ ಸಂದರ್ಭದಲ್ಲಿ 8 ಮಂದಿ ಯುವಕರನ್ನು ಬಂಧಿಸಿದ್ದಾರೆ. 500 ಗ್ರಾಂ ಗಾಂಜಾ, 8 ಮೊಬೈಲ್ ಫೋನ್ ಗಳು, ನಗದು, 2 ದ್ವಿಚಕ್ರ ವಾಹನಗಳನ್ನು ಬಂಧಿತರಿಂದ ವಶಪಡಿಸಿಕೊಳ್ಳಲಾಗಿದೆ. ಈ ವಿದ್ಯಾರ್ಥಿಗಳು ಕೇರಳದಿಂದ ಗಾಂಜಾವನ್ನು ಖರೀದಿ ಮಾಡಿ ತಂದು ಮಂಗಳೂರು ನಗರದಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು ಎಂದು ವರದಿಯಾಗಿದೆ.