ತುಮಕೂರು: ಅನಾರೋಗ್ಯದಿಂದ ಬಳಲುತ್ತಿರುವ ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳಿಗೆ ಸಿದ್ದಗಂಗಾ ಮಠದಲ್ಲೇ ಚಿಕಿತ್ಸೆ ಮುಂದುವರಿಸಲಾಗುತ್ತಿದೆ. ಸಿದ್ಧಗಂಗಾ ಶ್ರೀಗಳ ಆರೋಗ್ಯ ಸ್ಥಿರವಾಗಿದೆ. ನೆನ್ನೆ ರಾತ್ರಿ ಶ್ರೀಗಳ ರಕ್ತದೊತ್ತಡ ಹೆಚ್ಚಾಗಿತ್ತು, ಅದಕ್ಕೆ ಚಿಕಿತ್ಸೆ ನೀಡಲಾಗಿದೆ ಶ್ವಾಸಕೋಶದಲ್ಲಿ ಸೋಂಕಿನ ಅಂಶ ಕಡಿಮೆಯಾಗಿದೆ. ಉಸಿರಾಟದ ತೊಂದರೆ ಇರುವದರಿಂದ ಕೃತಕ ಉಸಿರಾಟದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಡಾ.ಪರಮೆಶ್ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.
ಶ್ರೀಗಳ ಆರೋಗ್ಯದ ಕುರಿತು ಇಂದು ಬೆಳಿಗ್ಗೆ ಮಾಹಿತಿ ನೀಡಿರುವ ಸಿದ್ದಗಂಗಾ ಆಸ್ಪತ್ರೆಯ ವೈದ್ಯ ಡಾ.ಪರಮೇಶ್, “ಚಿಕಿತ್ಸೆ ಮುಂದುವರೆದಿದೆ. ಶ್ರೀಗಳ ಆರೋಗ್ಯ ಸ್ಥಿರವಾಗಿದೆ. ಸೋಂಕು ಕಡಿಮೆಯಾಗುತ್ತಿದೆ. ಆದರೆ ಉಲ್ಬಣಗೊಳ್ಳುವ ಸಾಧ್ಯತೆ ಇರುವುದರಿಂದ ಯಾರಿಗೂ ದರ್ಶನಕ್ಕೆ ಅವಕಾಶ ನೀಡಲಾಗುತ್ತಿಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ.