ಹರಿಯಾಣ : ಇಂದು ಮುಂಜಾನೆ 5 ಗಂಟೆ ವೇಳೆಗೆ ನಿರ್ಮಾಣ ಹಂತದಲ್ಲಿದ್ದ ನಾಲ್ಕು ಅಂತಸ್ಥಿನ ಕಟ್ಟಡ ಕುಸಿದ ಪರಿಣಾಮ, ಎಂಟಕ್ಕೂ ಹೆಚ್ಚು ಕಾರ್ಮಿಕರು ಕಟ್ಟಡದ ಅವಶೇಷಗಳ ಕೆಳಗೆ ಸಿಲುಕಿರುವ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ನಡೆದಿದೆ ಎಂದು ತಿಳಿದುಬಂದಿದೆ.
ಈ ಘಟನೆಯ ಬಗ್ಗೆ ಮಾಹಿತಿ ತಿಳಿದು ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದೆ ಎನ್ನಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಜೊತೆ ಎನ್ಡಿಆರ್ಎಫ್ನ ಮೂರು ತಂಡ ಕೈ ಜೋಡಿಸಿ ರಕ್ಷಣಾ ಕಾರ್ಯ ಮುಂದುವರೆಸಿವೆ ಎಂದು ವರದಿಯಾಗಿದೆ.