ಬೆಂಗಳೂರಿನ ಸಂಪಿಗೆಹಳ್ಳಿಯಲ್ಲಿ ಸಿಎಆರ್ ಪೇದೆ ಸುಭಾಷ್ ಕುಟುಂಬ ಸಮೇತ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಪತ್ನಿ, ಮಕ್ಕಳಿಬ್ಬರು ಮೃತಪಟ್ಟಿದ್ದು ಸುಭಾಷ್ ಸ್ಥಿತಿ ಗಂಭೀರವಾಗಿದೆ.
ಇಂದು ಬೆಳಗ್ಗೆ ಸುಭಾಷ್ ಅವರ ಅಣ್ಣ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ವಿಷ ಸೇವಿಸಿ ಅಸ್ವಸ್ಥರಾಗಿದ್ದ ನಾಲ್ವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಸುಭಾಷ್ ಪತ್ನಿ ವೀಣಾ, ಮೂರು ವರ್ಷದ ಮಾನ್ಯ ಹಾಗೂ ಒಂದೂವರೆ ವರ್ಷದ ಪೃಥ್ವಿ ಮೃತಪಟ್ಟಿದ್ದಾರೆ.
ಇನ್ನೂ ಪೇದೆ ಸುಭಾಷ್ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬಳ್ಳಾರಿ ಮೂಲದ ಸುಭಾಷ್ ಅವರ ಕುಟುಂಬ ಸಂಪಿಗೆಹಳ್ಳಿಯ ಪೊಲೀಸ್ ಕ್ವಾರ್ಟಸ್ ನಲ್ಲಿ ವಾಸವಿತ್ತು. ನಾಲ್ಕು ವರ್ಷಗಳ ಹಿಂದೆ ಸುಭಾಷ್ ವೀಣಾ ಎಂಬುವರನ್ನು ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದರು.
RELATED ARTICLES  ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.59.56 ವಿದ್ಯಾರ್ಥಿಗಳು ತೇರ್ಗಡೆ