ನವದೆಹಲಿ : ಶಿಕ್ಷಣ ಹಕ್ಕು ಕಾಯ್ದೆಯಡಿ ಇನ್ನು ಮುಂದೆ ಆರ್ಥಿಕವಾಗಿ ಹಿಂದುಳಿದಿರುವ ಮಕ್ಕಳಿಗೆ 12ನೆ ತರಗತಿವರೆಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯ್ದೆಯಡಿ ಶೇ.25ರಷ್ಟು ಮೀಸಲಾತಿಯನ್ನು ಎಲ್ಲಾ ಶಾಲೆಗಳಲ್ಲಿ ಜಾರಿಗೆ ತರಲು ಮೋದಿ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ಕೈಗೊಳ್ಳಲು ಹೊರಟಿದೆ ಎಂದು ತಿಳಿದುಬಂದಿದೆ.
ಅಲ್ಲದೇ , ಇತ್ತೀಚೆಗಷ್ಟೆ ಮೇಲ್ವರ್ಗದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ.10ರಷ್ಟು ಮೀಸಲಾತಿ ಕಲ್ಪಿಸಿದ್ದ ಕೇಂದ್ರ ಸರ್ಕಾರ ಇದೀಗ ಮತ್ತೊಂದು ಮಹತ್ವದ ನಿರ್ಧಾರ ಕೈಗೊಳ್ಳಲು ಮುಂದಾಗಿದೆ ಎನ್ನಲಾಗಿದೆ.
ಈ ನಿರ್ಧಾರವನ್ನು ಚುನಾವಣೆ ಹೊತ್ತಲ್ಲಿಯೇ ಕೈಗೊಳ್ಳಲು ಮುಂದಾಗಿರುವ ಕೇಂದ್ರ, ಒಂದು ವೇಳೆ ಈ ಕಾಯ್ದೆ ಜಾರಿಯಾದರೆ ದೇಶದಲ್ಲಿ ಕೋಟ್ಯಂತರ ಮಕ್ಕಳು 12ನೆ ತರಗತಿವರೆಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ಪಡೆಯಲಿದ್ದಾರೆ. ಇದನ್ನು ಸಾಂವಿಧಾನಿಕವಾಗಿ ಎಲ್ಲಾ ಶಾಲೆಗಳಲ್ಲಿಯೂ ಶೀಘ್ರದಲ್ಲಿಯೇ ಜಾರಿಗೆ ತರಲು ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ವರದಿಯಾಗಿದೆ.