ಯಲ್ಲಾಪುರ: ಸರಕಾರಿ ಸೇವೆಯಲ್ಲಿ ವರ್ಗಾವಣೆ, ನಿವೃತ್ತಿ ಸಹಜವಾಗಿದ್ದು, ಅಧಿಕಾರಿಗಳು ಸಾರ್ವಜನಿಕರೊಂದಿಗೆ ಸೇವೆಯಲ್ಲಿ ಇರುವಷ್ಟು ದಿವಸ ಪ್ರೀತಿ ವಿಶ್ವಾಸದಿಂದ ಕಾರ್ಯನಿರ್ವಹಿಸಿದರೆ, ಜನ ಎಂದಿಗೂ ಮರೆಯುವುದಿಲ್ಲ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.
ಅವರು ಸೋಮವಾರ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಕಾರ್ಯಾಲಯದಲ್ಲಿ ಸಂಘ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಹೆಸ್ಕಾಂನ ಯಲ್ಲಾಪುರ ಉಪ ವಿಭಾಗದಲ್ಲಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿ ಸೇವೆಯಿಂದ ನಿವೃತ್ತಿ ಹೊಂದಿದ ಎಚ್. ರಂಗಪ್ಪ ಅವರನ್ನು ಸನ್ಮಾನಿಸಿ ಮಾತನಾಡುತ್ತಿದ್ದರು.
ಸಿಬ್ಬಂದ್ದಿ ಕೊರತೆಯ ನಡುವೆ ಜನಪರವಾಗಿ ಸೇವೆ ಸಲ್ಲಿಸುವುದು ಸುಲಭವಲ್ಲ. ಅಂತಹುದರಲ್ಲಿ ರಂಗಪ್ಪ ಅವರು ದಕ್ಷತೆಯಿಂದ ಕಾರ್ಯ ನಿರ್ವಸಿದ್ದಾರೆ ಎಂದರು,
ಶಿರಸಿ ಹೆಸ್ಕಾಂ ವಿಭಾಗದ ಕಾರ್ಯನಿರ್ವಾಹಕ ಅಭಿಯಂತ ದೀಪಕ ಕಾಮತ ಮಾತನಾಡಿ, ರಂಗಪ್ಪ ಸುಧೀರ್ಘ 33 ವರ್ಷಗಳ ಕಾಲ ಯಾವುದೇ ಕಪ್ಪು ಚುಕ್ಕೆ ಇಲ್ಲದೇ ಸೇವೆ ಸಲ್ಲಿಸಿದ್ದಾರೆ ಎಂದರು.
ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷ ವೇಣುಗೋಪಾಲ ಮದ್ಗುಣಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಲ್ಲಿನ ಗುತ್ತಿಗೆದಾರರು ಹೆಸ್ಕಾಂ ನೊಂದಿಗೆ ಭಾಂದವ್ಯ ಹೊಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ರಂಗಪ್ಪ ಅವರು, ಸರಕಾರ, ಸಾರ್ವಜನಿಕರ ನಡುವೆ ಕೊಂಡಿಯಾಗಿ ಕೆಲಸ ಮಾಡಿದ್ದಾರೆ. ಅವರ ನಿವೃತ್ತಿ ಜೀವನ ಉಜ್ವಲವಾಗಲೆಂದರು.
ಎಚ್. ರಂಗಪ್ಪ ಸನ್ಮಾನ ಸ್ವೀಕರಿಸಿ ಕೃತಜ್ಞತೆ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಸಂಘದ ಆರಂಬಿಕ ನೆಲೆಯಲ್ಲಿ ಸೇವೆ ಸಲ್ಲಿಸಿದ ಕುಮಾರ ಅವರನ್ನು ಸನ್ಮಾನಿಸಲಾಯಿತು. ಗುತ್ತಿಗೆದಾರ ಶಾಂತಾರಾಮ ಹೆಗಡೆ ಸ್ವಾಗತಿಸಿದರು. ಸುಬ್ರಾಯ ಬಿದ್ರೆಮನೆ ನಿರೂಪಿಸಿದರು. ಸಂಘದ ಕಾರ್ಯದರ್ಶಿ ವಿ.ಕೆ. ಭಟ್ಟ ಶಿಗೇಪಾಲ್ ವಂದಿಸಿದರು.

RELATED ARTICLES  12 ಅಡಿಯ ಕಾಳಿಂಗ ಸರ್ಪ ಕಂಡು ಬೆಚ್ಚಿದ ಜನ