ಶಿರಸಿ: ಮಹಾಘಟಬಂಧನ್ ಎನ್ನುವುದು ವಿರೋಧ ಪಕ್ಷಗಳ ಸಾಮೂಹಿಕ ಆತ್ಮಹತ್ಯೆ ಯತ್ನ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಹೇಳಿದರು.
ಯಲ್ಲಾಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಲೋಕಸಭಾ ಚುನಾವಣೆಯಲ್ಲಿ ಮಹಾಘಟಬಂಧನ್ ವಿಫಲವಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಕಾಂಗ್ರೆಸ್ ಹಿಂದಿನ ಚುನಾವಣೆಗಿಂತಲೂ ಹೀನಾಯ ಸ್ಥಿತಿ ತಲುಪಲಿದೆ, ಲೋಕಸಭೆಯಲ್ಲಿ ವಿರೋಧ ಪಕ್ಷವೇ ಇಲ್ಲದ ರೀತಿಯಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ. ರಾಹುಲ್ ಗಾಂಧಿಗೆ ರಫೇಲ್ ಎಂದರೆ ಏನೆಂದು ಗೊತ್ತಿಲ್ಲ. ರಫೇಲ್ ಎಂದರೆ ಮೂರು ಚಕ್ರದ ಸೈಕಲ್ ಎಂದು ತಿಳಿದಿದ್ದಾರೆ. ಅವರ ಟೀಕೆಗೆ ಪ್ರತಿಕ್ರಿಯಿಸುವ ಅಗತ್ಯವಿಲ್ಲ ಎಂದು ಕಿಡಿಕಾರಿದರು.