ಕುಮಟಾ : ಇತ್ತೀಚಿನ ದಿನಗಳಲ್ಲಿ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವರಾದ ಅನಂತಕುಮಾರ ಹೆಗಡೆಯವರು ನೀಡುತ್ತಿರುವ ಅಸಂಬದ್ಧ ಮತ್ತು ವಿವಾದಾತ್ಮಕ ಹೇಳಿಕೆಗಳನ್ನು ಖಂಡಿಸುವ ಉದ್ದೇಶದಿಂದ ಬ್ಲಾಕ್ ಕಾಂಗ್ರೆಸ್ ಕುಮಟಾ ಇದರ ವತಿಯಿಂದ ಇಂದು ಪತ್ರಿಕಾ ಗೋಷ್ಠಿ ನಡೆಸಿ ಅವರ ಹೇಳಿಕೆಗಳನ್ನು ಖಂಡಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕಿ ಶ್ರೀಮತಿ ಶಾರದಾ ಶೆಟ್ಟಿಯವರು ಕೇಂದ್ರ ಸಚಿವರಾಗಿರುವ ಅನಂತಕುಮಾರ ಹೆಗಡೆಗೆ ತಾವು ಮಾಡಬೇಕಾಗಿರುವ ಕೆಲಸಗಳ ಬಗ್ಗೆ ಅರಿವಿಲ್ಲ. ಜಿಲ್ಲೆಯಲ್ಲಿ ಶಾಂತಿಯನ್ನ ಕದಡುವ ಕೆಲಸ ಮಾಡುತ್ತಿದ್ದಾರೆ. ಮಾಡುವ ಕೆಲಸ ಬಿಟ್ಟು ಬೇರೆಯವರ ಮೇಲೆ ಗೂಬೆ ಕೂರಿಸೋದು ಅವರ ಕೆಲಸ ಆಗಿದೆ ಎಂದು ಆರೋಪಿಸಿದರು.
ಸಚಿವ ಆರ್.ವಿ.ದೇಶಪಾಂಡೆಯ ಕುರಿತೂ ಅನಂತಕುಮಾರ್ ಹೆಗಡೆ ಟೀಕೆ ಮಾಡಿದ್ದರು. ಇದಕ್ಕೂ ಆಕ್ರೋಶ ವ್ಯಕ್ತಪಡಿಸಿರುವ ಇವರು ಹೆಗಡೆ ಬೇರೆಯವರು ಏನು ಅಭಿವೃದ್ಧಿ ಮಾಡಿದ್ದಾರೆ ಎಂದು ಟೀಕಿಸುತ್ತಾರೆ. ತಾವು ಏನು ಮಾಡಿದ್ದಾರೆ ಅನ್ನೋದನ್ನ ಜನರಿಗೆ ಹೇಳಲಿ. ಸಂಸದರ ಹಣದಲ್ಲಿ ಎಷ್ಟು ಗ್ರಾಮಗಳನ್ನ ಅಭಿವೃದ್ಧಿ ಮಾಡಿದ್ದೀರಾ? ಹಿಂದುತ್ವದ ಹೆಸರಿನಲ್ಲಿ ಕೇವಲ ವೋಟ್ಗಳಿಕೆಗೆ ರಾಜಕಾರಣ ಮಾಡುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಜನರೇ ಪಾಠ ಕಲಿಸುತ್ತಾರೆ ಎಂದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ.ಎಲ್.ನಾಯ್ಕ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾ ತಾರಾ ಗೌಡ, ತಾಲೂಕು ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸುರೇಖಾ ವಾರೇಕರ್ ಮುಖಂಡರಾದ ಹೊನ್ನಪ್ಪ ನಾಯಕ, ನಾಗೇಶ್ ನಾಯ್ಕ, ಯಶೋಧ ಶೆಟ್ಟಿ,ಮಧುಸೂಧನ ಶೇಟ್, ಕೃಷ್ಣಾನಂದ ವೆರ್ಣೇಕರ್, ಎಂ.ಟಿ. ನಾಯ್ಕ ಮುಂತಾದವರು ಉಪಸ್ಥಿತರಿದ್ದರು…