ಕಾರವಾರ: ಪದ್ಮಶ್ರೀ ಪ್ರಶಸ್ತಿ ಪುರಸ್ಕøತೆ ಸುಕ್ರಿ ಬೊಮ್ಮ ಗೌಡ ಅವರಿಂದ ಜಾನಪದ ಹಾಡು ಪ್ರಸ್ತುತಿ ಕಾರ್ಯಕ್ರಮವನ್ನು ಉಜರೆಯ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಮತ್ತು ಅಲ್ಲಿಯ ಕನ್ನಡ ವಿಭಾಗದ ಆಶ್ರಯದಲ್ಲಿ ಫೆ.6 ರಂದು ಮಧ್ಯಾಹ್ನ 2.15ಕ್ಕೆ ಸೆಮಿನಾರ್ ಹಾಲ್‍ನಲ್ಲಿ ಹಮ್ಮಿಕೊಳ್ಳಲಾಗಿದೆ.
ಮುಖ್ಯ ಅತಿಥಿಗಳಾಗಿ ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಅರವಿಂದ ಕರ್ಕಿಕೋಡಿ ಪಾಲ್ಗೊಳ್ಳಲಿದ್ದಾರೆ.
ಅಧ್ಯಕ್ಷತೆಯನ್ನು ಉಜರೆ ಎಸ್.ಡಿ.ಎಂ. ಕಾಲೇಜಿನ ಪ್ರಾಚಾರ್ಯ ಪ್ರೊ.ಟಿ.ಎನ್.ಕೇಶವ ವಹಿಸಲಿದ್ದಾರೆ ಎಂದು ಕನ್ನಡ ವಿಭಾಗದ ಮುಖ್ಯಸ್ಥ ಡಾ. ಬಿ.ಪಿ.ಸಂಪತ್‍ಕುಮಾರ ಪ್ರಕಟಣೆಯಲ್ಲಿ ತಿಳಿಸದ್ದಾರೆ.