ಯಲ್ಲಾಪುರ:-ಪಟ್ಟಣದ ಎ.ಪಿ.ಎಂ.ಸಿ ಆವಾರದ ಗೋಡಾನ್ ನಲ್ಲಿ ವಿದ್ಯುತ್ ಶಾರ್ಟ್ ಸಕ್ಯೂಟ್ ನಿಂದ ಬೆಂಕಿ ತಗುಲಿ ಲಕ್ಷಾಂತರ ರೂ.ಮೌಲ್ಯದ ವಸ್ತುಗಳು ಸುಟ್ಟು ಕರಕಲಾದ ಘಟನೆ ವರದಿಯಾಗಿದೆ.
ಇಲ್ಲಿನ ಮಲೆನಾಡು ಕೃಷಿ ಅಭಿವೃದ್ಧಿ ಸೊಸೈಟಿ ಯ ಗೋಡಾನ್ ನಲ್ಲಿ ಸಂಗ್ರಹಿಸಿಟ್ಟ ಪಿ.ವಿ.ಸಿ ಪೈಪ್, ತುಂತುರು ನೀರಾವರಿ ಪೈಪ್ ಹಾಗೂ ಸಣ್ಣ ಪುಟ್ಟ ವಸ್ತುಗಳಿಗೆ ಬೆಂಕಿ ತಗುಲಿದ ಪರಿಣಾಮ ಅಪಾರ ಪ್ರಮಾಣದ ಹಾನಿಯಾಗಿದೆ ಎನ್ನಲಾಗಿದೆ.
ಈ ಘಟನೆ ಸಂಭವಿಸಿದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಗೊಂದಲ ಉಂಟಾಗಿತ್ತು.