ಅಂಕೋಲಾ:ಅಂಕೋಲಾ ಕಡೆಯಿಂದ ಕಾರವಾರದತ್ತ ಹೊರಟ ಕಾರಿಗೆ ಎದುರಿನಿಂದ ಓವರ್ ಟೇಕ್ ಮಾಡಿಕೊಂಡು ಬಂದ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತ ಪಟ್ಟಿದ್ದು ಮೂವರು ಗಂಭೀರ ಗಾಯಗೊಂಡಿರುವ ಘಟನೆ ಅಂಕೋಲಾ ತಾಲೂಕಿನ ಹಾರವಾಡದ ಘಟ್ಟದಲ್ಲಿ ಸಂಭವಿಸಿದೆ.
ಟ್ಯಾಂಕರ್ ಚಾಲಕನ ನಿರ್ಲಕ್ಷ್ಯ ದ ಚಾಲನೆಯಿಂದ ಡಿಕ್ಕಿ ಸಂಭವಿಸಿದ್ದು ಕಾರನ್ನು ಸುಮಾರು 100 ಮೀ. ದೂರದ ವರೆಗೂ ನೂಕಿಕೊಂಡು ಹೋಗಿದೆ ಎಂದು ವರದಿಯಾಗಿದೆ.
ಮೃತಪಟ್ಟವರ ಹಾಗೂ ಗಾಯಗೊಂಡವರ ಗುರುತು ಇದುವರೆಗೂ ಪತ್ತೆಯಾಗಿಲ್ಲವಾದರೂ, ಕಾರಿನಲ್ಲಿ ಇದ್ದವರು ಬೆಂಗಳೂರು ಮೂಲದವರು ಎಂದು ತಿಳಿದು ಬಂದಿದೆ.
ಗಾಯಗೊಂಡವರನ್ನು ಕಾರವಾರದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.