ತುಮಕೂರು:ಇಂದು ಬೆಳಗ್ಗೆ ಕುಣಿಗಲ್ ತಾಲೂಕಿನ ಆಲಪ್ಪಗುಡ್ಡ ಬಳಿ ರಾಷ್ಟ್ರೀಯ ಹೆದ್ದಾರಿಯ ರಸ್ತೆ ಬದಿ ನಿಲ್ಲಿಸಿದ್ದ ಕಾರುಗಳಿಗೆ ಸಿ.ಟಿ.ರವಿ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಶಶಿಕುಮಾರ್ (28) ಹಾಗೂ ಸುನಿಲ್ ಗೌಡ (27) ಮೃತ ದುರ್ದೈವಿಗಳು ಎನ್ನಲಾಗಿದೆ.
ಎರಡು ಕಾರಿನಲ್ಲಿ 13 ಮಂದಿ ಸ್ನೇಹಿತರು ಶೃಂಗೇರಿ ಪ್ರವಾಸ ಮುಗಿಸಿ ಊರಿಗೆ ತೆರಳುತ್ತಿದ್ದರು. ಹೆದ್ದಾರಿ ಮಾರ್ಗ ಮಧ್ಯೆ ಮೂತ್ರ ವಿಸರ್ಜನೆಗೆಂದು ಕಾರು ನಿಲ್ಲಿಸಿದಾಗ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ಕಡೆಗೆ ವೇಗವಾಗಿ ಬಂದ ಸಿ.ಟಿ.ರವಿ ಕಾರು ಡಿಕ್ಕಿ ಹೊಡೆದಿದೆ. ಘಟನೆ ಕುರಿತು ಸಿ.ಟಿ. ರವಿ ವಿರುದ್ಧ ಕುಣಿಗಲ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 337, 304 ಅಡಿ ಎಫ್ ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ.