ಭಟ್ಕಳ : ಭಟ್ಕಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಜೆ. ಡಿ. ನಾಯ್ಕ ಇಂದು ಪುನಃ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ಕಾಂಗ್ರೇಸ್ ರಾಜಕೀಯ ವಲಯದಲ್ಲಿ ಹೊಸ ಅಧ್ಯಾಯ ಪ್ರಾರಂಭಿಸುವ ಬಗ್ಗೆ ಮನಸ್ಸು ಮಾಡಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ವಕೀಲರೂ ಆಗಿರುವ ಜೆ.ಡಿ.ನಾಯ್ಕ ಅವರು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಮ್ಮುಖದಲ್ಲಿ ಕಾಂಗ್ರೆಸ್‍ಗೆ ಸೇರ್ಪಡೆಯಾದರು. ಈ ಮೊದಲು ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದ್ದ ಅವರು ಈಗ ಪುನಃ ಕಾಂಗ್ರೆಸ್‌ ಸೇರ್ಪಡೆಗೊಂಡಿದ್ದಾರೆ.

RELATED ARTICLES  ಮತ್ತೆ ಲಾಕ್ ಆಯ್ತು ಭಟ್ಕಳ : ಕೊರೋನಾ ಹಿನ್ನಲೆ ಭಟ್ಕಳಕ್ಕೆ ಪ್ರವೇಶ ನಿರ್ಬಂಧ..!

   
ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಅವರು, ಕಳೆದ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿಯಿಂದ ಟಿಕೆಟ್ ಬಯಸಿದ್ದರು. ಆದರೆ, ಅವರಿಗೆ ಟಿಕೆಟ್ ಸಿಕ್ಕಿರಲಿಲ್ಲ. ಹೀಗಾಗಿ ಅವರು ಅಸಮಾಧಾನಗೊಂಡಿದ್ದರು. ತಮ್ಮ ಮುಂದಿನ ರಾಜಕೀಯ ಭವಿಷ್ಯಕ್ಕಾಗಿ ಮರಳಿ ಕಾಂಗ್ರೆಸ್‍ಗೆ ಸೇರ್ಪಡೆ ಆಗಿದ್ದಾರೆ ಎನ್ನಲಾಗಿದೆ.

RELATED ARTICLES  ಮನೆ, ಮನಗಳಲ್ಲಿ ಕನ್ನಡ ಮೊಳಗಲಿ : ಆರ್. ಎಲ್. ಭಟ್ಟ

     ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ, ಕೆಪಿಸಿಸಿ ಜಿಲ್ಲಾ ಸಮಿತಿ ಅಧ್ಯಕ್ಷ ಭೀಮಣ್ಣ ನಾಯ್ಕ ಹಾಜರಿದ್ದರು.