ಬೆಂಗಳೂರು (ಫೆ.23): ಹಿರಿಯ ಸಾಹಿತಿ ಹಾಗೂ ಸ್ವಾತಂತ್ರ್ಯ ಹೋರಾಟಗಾರರಾಗಿದ್ದ  ನಾಡೋಜ ಕೋ.ಚೆನ್ನಬಸಪ್ಪ ಇಂದು ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದದು, ಎಂಎಸ್​ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದರು.  98 ವರ್ಷದ ಅವರು ಐವರು ಮಕ್ಕಳನ್ನು ಅಗಲಿದ್ದಾರೆ.

ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಾಮಡುಗು ಸಮೀಪದ ಆಲೂರಿನಲ್ಲಿ ಹುಟ್ಟಿದ  ಚೆನ್ನಬಸಪ್ಪ ವಿದ್ಯಾರ್ಥಿಯಾಗಿದ್ದಾಗಲೇ  ‘ಭಾರತ ಬಿಟ್ಟು ತೊಲಗಿ’ (ಕ್ವಿಟ್ಟ ಇಂಡಿಯಾ) ಚಳವಳಿಯಲ್ಲಿ ಭಾಗಿಯಾಗಿ ಸೆರೆವಾಸ ಅನುಭವಿಸಿದವರು. ಕಾನೂನು ಪದವಿ ಓದಿದ  ಅವರು ಸಾಹಿತ್ಯ ಪ್ರೇಮಿಯಾಗಿದ್ದರು.

ಹಿರಿಯ ಸಾಹಿತಿಯ ಅಗಲಿಕೆಗೆ ನಾಡಿನ ಜನ, ಸಾಹಿತ್ಯವಲಯ ಹಾಗೂ ರಾಜಕೀಯ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ.

RELATED ARTICLES  ಪದವೀಧರ ಶಾಲಾ ಶಿಕ್ಷಕರ ನೇಮಕಾತಿ ಬಯಸಿದವರಿಗೆ ಗುಡ್ ನ್ಯೂಸ್.