ಶಿರಸಿ: ಅರಣ್ಯ ಅತಿಕ್ರಮಣ ತೆರವು ಪ್ರಕ್ರಿಯೆಯ ಸಂಬಂಧ ಉತ್ತರ ಕನ್ನಡ ಜಿಲ್ಲಾ ಅರಣ್ಯ ಅತಿಕ್ರಮಣದಾರ ಹೋರಾಟಗಾರರ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಆದರೆ ಇದೇ ಸಂದರ್ಭದಲ್ಲಿ ಇಲ್ಲಿನ ಕೆನರಾ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಗೆ ಅರಣ್ಯ ಅತಿಕ್ರಮಣದಾರರು ಮುತ್ತಿಗೆ ಹಾಕಿದ ಘಟನೆಯೂ ನಡೆದಿದೆ.

RELATED ARTICLES  ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿತು ಕಾಲೇಜು ಉಪನ್ಯಾಸಕರುಗಳ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ.

ಅರಣ್ಯ ಅತಿಕ್ರಮಣ ಕಾಯ್ದೆ ಪ್ರಕ್ರಿಯೆ ಜಾರಿಯಲ್ಲಿರುವ ವೇಳೆಯೇ ಅರಣ್ಯ ಅತಿಕ್ರಮಣದಾರರನ್ನು ಒಕ್ಕಲೆಬ್ಬಿಸುತ್ತಿರುವ ಅರಣ್ಯ ಇಲಾಖೆ ಕ್ರಮ ಸರಿಯಲ್ಲ. ಸರ್ಕಾರ ಈ ವಿಷಯದಲ್ಲಿ ಮಧ್ಯ ಪ್ರವೇಶಿಸಿ ನ್ಯಾಯ ಒದಗಿಸಬೇಕೆಂದು ಆಗ್ರಹಿಸಲಾಯಿತು.

RELATED ARTICLES  ಗಿಡನೆಟ್ಟು ಶಾಸಕರ ಜನ್ಮದಿನ ಆಚರಿಸಿದ ವಿದ್ಯಾರ್ಥಿಗಳು.

5621 ಅತಿಕ್ರಮಣದಾರರ 3159 ಹೆಕ್ಟೇರ್ ಪ್ರದೇಶ ವಶಪಡಿಸಿಕೊಳ್ಳಲಾಗಿದೆ ಎಂದು ಸರ್ಕಾರಕ್ಕೆ ನೀಡಿದ ವರದಿ ಸುಳ್ಳಿನಿಂದ ಕೂಡಿದೆ ಎಂದು ಈ ವೇಳೆ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.