ಶಿರಸಿ :-ಸಿದ್ದಾಪುರ ತಾಲೂಕಿನ ಕಾಳೇನಳ್ಳಿ ಬಳಿ ವ್ಯಾನ್ ಮತ್ತು ಬೈಕ್ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವು ಕಂಡ ಘಟನೆ ಇದೀಗ ವರದಿಯಾಗಿದೆ.
ಉಲ್ಲಾಸ್ ಬೈಲೂರು ಎಂಬ ಬೈಕ್ ಸವಾರ ಸಾವನ್ನಪ್ಪಿದ್ದು ಇವರು ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಯಲ್ಲಿ ಸಹಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗಿದೆ.
ವ್ಯಾನ್ ನ ಅಡಿಗೆ ಬೈಕ್ ಸಿಲುಕಿದ್ದು ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ.
ಶಿರಸಿಯಿಂದ ಸಿದ್ದಾಪುರ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಸಿದ್ದಾಪುರ ಕಡೆಯಿಂದ ಶಿರಸಿಗೆ ಹೋಗುತ್ತಿದ್ದ 407ವ್ಯಾನ್ ವೇಗದಿಂದ ಬಂದು ಡಿಕ್ಕಿ ಹೊಡೆದಿದೆ. ಈ ಪರಿಣಾಮ ಶಿಕ್ಷಕ ಸಾವನ್ನಪ್ಪಿದರು ಎನ್ನಲಾಗಿದೆ.
ಘಟನೆ ಸಂಬಂಧ ಸಿದ್ದಾಪುರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.