ನವದೆಹಲಿ: ಜೈಷ್ ಉಗ್ರರ ಮೇಲೆ ದಾಳಿ ನಡೆಸಿದ ಬಳಿಕ ಭಾರತದ ಸೈನಿಕರನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ವಾಯುಸೇನೆ ಇಂದು ಬೆಳಗ್ಗೆ ದಾಳಿ ಮಾಡಿದೆ. ಪಾಕಿಸ್ತಾನದ ವೈಮಾನಿಕ ದಾಳಿಯನ್ನು ಭಾರತ ವಿಫಲಗೊಳಿಸಿದೆ. ಭಾರತದ ಗಡಿ ಉಲ್ಲಂಘಿಸಿದ್ದ ಪಾಕಿಸ್ತಾನದ ಎಫ್-16 ಯುದ್ಧ ವಿಮಾನವನ್ನು ಭಾರತೀಯ ವಾಯುಪಡೆ ಹೊಡೆದುರುಳಿಸಿದೆ ಎಂದು ಬುಧವಾರ ವಿದೇಶಾಂಗ ಸಚಿವಾಲಯ ಖಚಿತಪಡಿಸಿದೆ ಎಂದು ತಿಳಿದುಬಂದಿದೆ.
ಈಗ ಉಭಯ ದೇಶಗಳ ನಡುವೆ ಯುದ್ಧ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಅವರು, ಭಾರತದ ವಾಯು ಗಡಿ ಉಲ್ಲಂಘಿಸಿದ ಪಾಕ್ ನ ಒಂದು ಯುದ್ಧ ವಿಮಾನವನ್ನು ಹೊಡೆದುರುಳಿಸಿದ್ದೇವೆ.
ಈ ಕಾರ್ಯಾಚರಣೆ ವೇಳೆ ನಮ್ಮ ಮಿಗ್ -21 ವಿಮಾನ ಪತನವಾಗಿದ್ದು, ಓರ್ವ ಪೈಲಟ್ ನಾಪತ್ತೆಯಾಗಿದ್ದಾರೆ. ಆ ಪೈಲಟ್ ನಮ್ಮ ವಶದಲ್ಲಿದ್ದಾರೆ ಎಂದು ಪಾಕ್ ಹೇಳಿದೆ. ಆದರೆ ಈ ಬಗ್ಗೆ ಪರಿಶೀಲಿಸಬೇಕಿದೆ ಎಂದರು ಎನ್ನಲಾಗಿದೆ.