ಶಿರಸಿ:ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುವ ವಿವಿಧ ದಿನಾಂಕಗಳಂದು ಪರೀಕ್ಷೆಗೆ ಹಾಜರಾಗುವ ದ್ವಿತೀಯ ಪಿಯುಸಿಯ ಎಲ್ಲ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಳ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ಅದಷ್ಟೇ ಅಲ್ಲದೆ ವಿದ್ಯಾರ್ಥಿಗಳು ಪುನಃ ವಾಸ ಸ್ಥಳಕ್ಕೆ ಹಿಂದಿರುಗುವಾಗ ವಾಕರಸಾ ಸಂಸ್ಥೆಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಳ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.
ಪರೀಕ್ಷೆಗೆ ಆಗಮಿಸುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.