ಕಲ್ಬುರ್ಗಿ : ಇತ್ತೀಚೆಗಷ್ಟೆ ಕಾಂಗ್ರೆಸ್ ನಲ್ಲಿ ಅಸಮಾಧಾನಗೊಂಡು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದ ಉಮೇಶ್ ಜಾಧವ್ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಕಲ್ಬುರ್ಗಿಯಲ್ಲಿ ನಡೆಯುತ್ತಿರುವ ಬಿಜೆಪಿ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸಮ್ಮುಖದಲ್ಲಿ ಉಮೇಶ್ ಜಾಧವ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ನಗರದಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದ ಬಳಿಕ ಮಾತನಾಡಿದ ಅವರು, ಇವತ್ತು ಬಹಳ ಸಂತೋಷ ಹಾಗು ಹೆಮ್ಮೆಯಿಂದ ಬಿಜೆಪಿ ಸೇರಿದ್ದೇನೆ. ಇಂದು ನನ್ನನ್ನು ಬಹಳ ಚೆನ್ನಾಗಿ ಬರಮಾಡಿಕೊಂಡಿದ್ದಾರೆ. ನನಗೆ ಒಂದು ಅವಕಾಶ ನೀಡಿ ಅಂತಾ ನಿಮಗೆ ಕೈ ಜೋಡಿಸುತ್ತೇನೆ. ಮತ್ತೊಮ್ಮೆ ಮೋದಿ ಪ್ರಧಾನಿಯಾಗಬೇಕು ಎಂದು ಉಮೇಶ್ ಜಾಧವ್ ಹೇಳಿದ್ದಾರೆ ಎಂದು ವರದಿಯಾಗಿದೆ.