ನವದೆಹಲಿ:  ಅಯೋಧ್ಯೆಯ ರಾಮಜನ್ಮಭೂಮಿ-ಬಾಬರಿ ಮಸೀದಿ ವಿವಾದವನ್ನು ಸಂಧಾನದ ಮೂಲಕ ಬಗೆಹರಿಸಿಕೊಳ್ಳಿ ಎಂದು ಸುಪ್ರೀಂಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ.   ಸಂಧಾನದ ಮೂಲಕವೇ ವಿವಾದ ಬಗೆಹರಿಯಲಿದೆ ಎಂದು ತೀರ್ಪು ನೀಡಿದೆ. ಅಲ್ಲದೆ ಸಂಧಾನಕ್ಕಾಗಿ ತಾನೇ ಸಂಧಾನ ಸಮಿತಿಯನ್ನೂ ಕೂಡ ರಚನೆ ಮಾಡಿದೆ ಎಂದು ತಿಳಿದುಬಂದಿದೆ.

 ಸಂಧಾನಕ್ಕಾಗಿ ಮೂವರು ಸದಸ್ಯರ ಸಮಿತಿಯನ್ನೂ ನೇಮಕ ಮಾಡಿ ಆದೇಶ ಹೊರಡಿಸಿದೆ. ಅಂತೆಯೇ  ವಾರಗಳೊಳಗೆ ಸಂಧಾನ ಕುರಿತ ವರದಿ ನೀಡುವಂತೆ ಸಂಧಾನ ಸಮಿತಿಗೆ ಸೂಚನೆ ನೀಡಿದೆ.


ಸುಪ್ರೀಂಕೋರ್ಟ್ ರಚನೆ ಮಾಡಿರುವ ಸಮಿತಿಗೆ ನಿವೃತ್ತ ನ್ಯಾಯಮೂರ್ತಿ ಖಲೀಫುಲ್ಲಾ ಅವರು ಅಧ್ಯಕ್ಷರಾಗಿದ್ದಾರೆ. ಶ್ರೀ ರವಿಶಂಕರ್ ಗುರೂಜಿ, ಹಿರಿಯ ವಕೀಲ ಶ್ರೀರಾಮ್ ಪಂಚು ಅವರು ಸಹ ಸಮಿತಿಯಲ್ಲಿರಬೇಕು ಎಂದು ಕೋರ್ಟ್ ಹೇಳಿದೆ.


ಸಂಧಾನ ಸಮಿತಿ 8 ವಾರಗಳಲ್ಲಿ ಸಂಧಾನ ಪ್ರಕ್ರಿಯೆ ಮುಗಿಸಬೇಕು ಎಂದು ಕೋರ್ಟ್ ಹೇಳಿದೆ. ಮಾರ್ಚ್ 15 ರಿಂದ ಮೇ 15ರೊಳಗೆ ಸಂಧಾನ ಪ್ರಕ್ರಿಯೆ ಪೂರ್ಣಗೊಳ್ಳಬೇಕು. ದೇಶ ಲೋಕಸಭಾ ಚುನಾವಣೆ ಫಲಿತಾಂಶ ಎದುರು ನೋಡುತ್ತಿರುವಾಗ ಈ ವಿವಾದ ಸಂಧಾನವೂ ಪೂರ್ಣಗೊಳ್ಳಲಿದೆ ಎಂದು ವರದಿಯಾಗಿದೆ.