ಬೆಂಗಳೂರು: ಲೋಕಸಭಾ ಚುಣಾವಣೆ ಪ್ರಚಾರಕ್ಕಾಗಿ,ಕಾಂಗ್ರೆಸ್ ನ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರು ನಾಳೆ  ಏಲಕ್ಕಿ ನಾಡಾದ  ಹಾವೇರಿಗೆ ಆಗಮಿಸಿ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ  ಎಂದು ತಿಳಿದುಬಂದಿದೆ.

ನಾಳೆ ಧಾರವಾಡ ಲೋಕಸಭಾ ಕ್ಷೇತ್ರ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ  ಜನಪರಿವರ್ತನಾ  ಸಮಾವೇಶವು ಹಾವೇರಿಯಲ್ಲಿ ನಡೆಯಲಿದೆ.

ಶನಿವಾರ ಬೆಳಗ್ಗೆ 10 ಗಂಟೆಗೆ ಹಾವೇರಿಗೆ ಆಗಮಿಸಲಿರುವ ರಾಹುಲ್ ಗಾಂಧಿ ಅವರು, ಮಧ್ಯಾಹ್ನ 12 ಗಂಟೆ ಸುಮಾರಿಗೆ ಮುನ್ಸಿಪಲ್‌ ಮೈದಾನದಲ್ಲಿ ನಡೆಯಲಿರುವ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಚುನಾವಣಾ ಪ್ರಚಾರಕ್ಕೆ ಅಧಿಕೃತವಾಗಿ ಚಾಲನೆ ಕೊಡಲಿದ್ದಾರೆ.

ಹಾವೇರಿ-ಗದಗ 8 ವಿಧಾನಸಭಾ ಕ್ಷೇತ್ರದಿಂದ ಸುಮಾರು ಎರಡು ಲಕ್ಷ ಜನ ಸೇರುವ ನಿರೀಕ್ಷೆಯಿದೆ. ಶಿರಹಟ್ಟಿ ಮತಕ್ಷೇತ್ರದಿಂದಲೇ 40 ಸಾವಿರ ಕಾರ್ಯಕರ್ತರು ತೆರಳಲಿದ್ದಾರೆ ಎಂದು ತಿಳಿದು ಬಂದಿದೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್,ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್‌, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ ಅನೇಕ ಗಣ್ಯರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವರದಿಯಾಗಿದೆ.