ನವದೆಹಲಿ: ಲೋಕಸಭಾ ಚುನಾವಣೆಯ ದಿನಾಂಕವನ್ನು ಶೀಘ್ರದಲ್ಲಿಯೇ ಚುನಾವಣಾ ಆಯೋಗ ಪ್ರಕಟಿಸಲಿದ್ದು, 7 ರಿಂದ 8 ಹಂತಗಳಲ್ಲಿ ದೇಶಾದ್ಯಂತ ಚುನಾವಣೆ ನಡೆಯುವ ಸಾಧ್ಯತೆಯಿದೆ.
17ನೇ ಲೋಕಸಭಾ ಚುನಾವಣೆಗೆ ಈಗಾಗಲೇ ಅಗತ್ಯವಾದ ಅಂತಿಮ ಹಂತದ ಸಿದ್ಧತೆಗಳನ್ನು ಚುನಾವಣಾ ಆಯೋಗ ಮಾಡಿಕೊಳ್ಳುತ್ತಿದ್ದು, ಈ ತಿಂಗಳ ಅಂತ್ಯದಲ್ಲಿ ಅಥವಾ ಮುಂದಿನ ತಿಂಗಳ ಮೊದಲ ವಾರದದಲ್ಲಿ ಲೋಕಸಭಾ ಚುನಾವಣೆಯ ಸಂಪೂರ್ಣ ಪ್ರಕ್ರಿಯೆಯ ವೇಳಾಪಟ್ಟಿ ಬಿಡುಗಡೆ ಮಾಡಲಿದೆ ಎಂದು ತಿಳಿದುಬಂದಿದೆ.
ಪ್ರಸ್ತುತ ಲೋಕಸಭೆಯ ಕಾರ್ಯಾವಧಿ ಜೂನ್ 3ಕ್ಕೆ ಅಂತ್ಯವಾಗಲಿರುವ ಹಿನ್ನೆಲೆಯಲ್ಲಿ ಚುನಾವಣೆ ಎಷ್ಟು ಹಂತಗಳಲ್ಲಿ ನಡೆಯಲಿದೆ ಎಂಬ ಘೋಷಣೆಯ ಬಳಿಕ ಎರಡನೇ ಹಂತದ ಮತದಾನಕ್ಕಾಗಿ ಚುನಾವಣಾ ವೀಕ್ಷಕರ ಸಭೆ ನಡೆಯಲಿದೆ ಎಂದು ವರದಿಯಾಗಿದೆ.