ಧಾರವಾಡ : ನಿರ್ಮಾಣ ಹಂತದ ಕಟ್ಟಡ ಕುಸಿದು ಅವಶೇಷಗಳ ಅಡಿ ಸಿಲುಕಿರುವ ಮೂವರು ಜೀವಂತವಾಗಿರುವ ಮಾಹಿತಿ ರಕ್ಷಣಾ ತಂಡಗಳಿಗೆ ಸಿಕ್ಕಿದೆ ಎನ್ನಲಾಗಿದೆ.ದಿಲೀಪ್, ಸೋಮು ಮತ್ತು ಸಂಗೀತ ಎನ್ನುವರರು ಜೀವಂತವಾಗಿ ಅವಶೇಷಗಳ ಅಡಿ ಸಿಕ್ಕಿಹಾಕಿಕೊಂಡಿದ್ದಾರೆ ಎಂದು
ತಿಳಿದುಬಂದಿದೆ.
ಪಾರ್ಕಿಂಗ್ ಪ್ರದೇಶದಲ್ಲಿ ಈ ಮೂವರು ಸಿಕ್ಕಿಹಾಕಿಕೊಂಡಿದ್ದಾರೆ ಎಂದು ಬದುಕುಳಿದ ಮೂವರ ಪೈಕಿ ದಿಲೀಪ್ ಎಂಬುವವರು ಮಾಹಿತಿ ನೀಡಿದ್ದಾರೆ. ಅವರು ಇರುವುದು ಗೊತ್ತಾದ ತಕ್ಷಣವೇ ರಕ್ಷಣಾ ಸಿಬ್ಬಂದಿ ಅವರಿಗೆ ಆಕ್ಸಿಜನ್ ಪೂರೈಕೆ ಮಾಡಿದೆ. ಅವರು ಇರುವ ಸ್ಥಳವನ್ನು ಪ್ರವೇಶಿಸಲು ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ಸಿಬ್ಬಂದಿ ಪ್ರಯತ್ನವನ್ನು ಮುಂದುವರಿಸಿದೆ ಎನ್ನಲಾಗಿದೆ.
ಮೂವರು ಬದುಕುಳಿದಿರುವ ವಿಷಯ ತಿಳಿದ ತಕ್ಷಣವೇ ಜಿಲ್ಲಾಧಿಕಾರಿ ದೀಪಾ ಚೋಳನ್ ಸ್ಥಳಕ್ಕೆ ಆಗಮಿಸಿ ಮಾಹಿತಿ ಪಡೆದಿದ್ದಾರೆ ಎಂದು ವರದಿಯಾಗಿದೆ.