ಹುಬ್ಬಳ್ಳಿ:ಪೌರಾಡಳಿತ ಸಚಿವ ಸಿ.ಎಸ್. ಶಿವಳ್ಳಿ ಅವರು ಇಂದು ಹೃದಯಘಾತದಿಂದ ನಿಧನರಾಗಿದ್ದಾರೆ.ಧಾರವಾಡ ಜಿಲ್ಲೆಯ ಕುಂದಗೋಳ ಕಾಂಗ್ರೆಸ್ ಶಾಸಕರಾಗಿದ್ದ ಸಿಎಸ್ ಶಿವಳ್ಳಿ ಅವರಿಗೆ ಇಂದು  ಮಧ್ಯಾಹ್ನ 1.30ರ ಸುಮಾರಿಗೆ ತೀವ್ರ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಹುಬ್ಬಳ್ಳಿಯ ಲೈಫ್ ಲೈನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

RELATED ARTICLES  ಪ್ರೀತಿಸಿದ ಹುಡುಗಿಗಾಗಿ ಹಿಂದೂ ಧರ್ಮಕ್ಕೆ ಸೇರಿದ ಮುಸ್ಲಿಂ ಯುವಕ

ಬೈಪಾಸ್ ಸರ್ಜರಿ ಮಾಡಿಸಿಕೊಂಡಿದ್ದ ಸಿ.ಎಸ್ ಶಿವಳ್ಳಿ ಅವರು, ಧಾರವಾಡದಲ್ಲಿ ನಡೆದ ಕಟ್ಟಡ ದುರಂತ ಸ್ಥಳಕ್ಕೆ ಆಗಮಿಸಿ, ದಿಗ್ಬ್ರಮೆ ವ್ಯಕ್ತ ಪಡಿಸಿದ್ದರು. ಅಲ್ಲದೆ ನಿನ್ನೆ ಮಧ್ಯರಾತ್ರಿಯವರೆಗೂ ಕಟ್ಟಡ ದುರಂತ ಸ್ಥಳದಲ್ಲಿದ್ದು, ಪರಿಹಾರ ಕಾರ್ಯಗಳಲ್ಲಿ ಭಾಗವಹಿಸಿದ್ದರು ಎನ್ನಲಾಗಿದೆ.

RELATED ARTICLES  ತೊಡೆಯಲ್ಲಿ ವಿಪರೀತ ನೋವು ಇದ್ದರೂ ಲೆಕ್ಕಿಸದೆ ಚಿನ್ನ ಗೆದ್ದು ಸಂಭ್ರಮಿಸಿದ ಭಾರತದ ಸತೀಶ್‌ ಕುಮಾರ್ ಶಿವಲಿಂಗಂ.!

  ಮಧ್ಯಾಹ್ನ ಸ್ನೇಹಿತರೊಂದಿಗೆ ಮಾತನಾಡುವಾಗ ಹೃದಯಾಘಾತಕ್ಕೆ ಒಳಗಾಗಿದ್ದರು. ತಕ್ಷಣ ಅವರನ್ನು ಹುಬ್ಬಳ್ಳಿಯ ಲೈಫ್ ಲೈನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ನಿಧನರಾಗಿದ್ದಾರೆ.ಈಗಾಗಲೇ ಲೈಫ್ ಲೈನ್ ಆಸ್ಪತ್ರೆಗೆ ಭಾರೀ ಪೊಲೀಸ್ ಭದ್ರತೆ ಒದಗಿಸಲಾಗಿದೆ ಎಂದು ವರದಿಯಾಗಿದೆ.