ನವದೆಹಲಿ: ಟೀಮ್ ಇಂಡಿಯಾ ಮಾಜಿ ಕ್ರಿಕೆಟರ್ ಗೌತಮ್ ಗಂಭೀರ್ ರಾಜಕೀಯ ಅಖಾಡಕ್ಕೆ ಧುಮುಕಲಿದ್ದಾರೆ ಎನ್ನುವ ಸುದ್ದಿ ನಿಜವಾಗಿದ್ದು ಕೇಂದ್ರ ಸಚಿವರಾದ ರವಿಶಂಕರ್ ಪ್ರಸಾದ್ ಹಾಗೂ ಅರುಣ್ ಜೇಟ್ಲಿ ಸಮ್ಮುಖದಲ್ಲಿಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಗೌತಮ್ ಗಂಭೀರ್ ನವದೆಹಲಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಕ್ರೀಡೆಯಿಂದ ನಿವೃತ್ತಿ ಹೊಂದಿದ ಬಳಿಕ ಗಂಭೀರ್ ದೇಶ ಹಾಗೂ ದೇಶದ ಭದ್ರತೆ ಬಗ್ಗೆ ತಮ್ಮ ನಿಲುವನ್ನು ವ್ಯಕ್ತಪಡಿಸುತ್ತಲೇ ಬಂದಿದ್ದಾರೆ ಎಂದು ವರದಿಯಾಗಿದೆ.