ಭಟ್ಕಳ: ಶ್ರೀ ಗುರು ಸುಧೀಂದ್ರ ಬಿಬಿಎ ಹಾಗೂ ಬಿಸಿಎ ಕಾಲೇಜಿನಲ್ಲಿ ವಾರ್ಷಿಕೋತ್ಸವ ಹಾಗೂ 2018-19ನೇ ಸಾಲಿನ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವು ಜರುಗಿತು. ಈ ಸಂದರ್ಭದಲ್ಲಿ ಮುಖ್ಯಅತಿಥಿಗಳಾಗಿ ಆಗಮಿಸಿದ ಶಿರಸಿಯ ಉದ್ಯಮಿ, ಸಮಾಜ ಸೇವಕ, ಕೃಷಿಕ ಹಾಗೂ ಖ್ಯಾತ ವಾಗ್ಮಿ ರಾಮು ಹರಿ ಕಿಣಿ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಕಿವಿಮಾತನ್ನಾಡಿದರು.

RELATED ARTICLES  ಮಳೆಯಿಂದ ನೀರು ತುಂಬಿದ ಪ್ರದೇಶಗಳಿಗೆ ಶಾಸಕಿ ರೂಪಾಲಿ ನಾಯ್ಕ ಭೇಟಿ

ಮತ್ತೋರ್ವ ಮುಖ್ಯಅತಿಥಿಗಳಾಗಿ ಆಗಮಿಸಿದ ಶಿರೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರಾಜೀವ ನಾಯ್ಕ ” ಮೌಲ್ಯಯುತ ಶಿಕ್ಷಣ ವಿದ್ಯಾರ್ಥಿಗಳಿಗೆ ಅವಶ್ಯಕ ” ಎಂದು ಹೇಳಿದರು. ಈ ಸಂಧರ್ಭದಲ್ಲಿ ಟ್ರಸ್ಟ್‍ನ ಅಧ್ಯಕ್ಷರಾದ ಡಾ|| ಸುರೇಶ ನಾಯಕ, ಟ್ರಸ್ಟಿ ಮ್ಯಾನೆಜರ್ ರಾಜೇಶ ನಾಯಕ, ಟ್ರಸ್ಟ್‍ನ ಆಡಳಿತಾಧಿಕಾರಿ ಹಾಗೂ ಬಿಬಿಎ ಕಾಲೇಜಿನ ಪ್ರಾಂಶುಪಾಲ ನಾಗೇಶ ಭಟ್, ಬಿಸಿಎ ಕಾಲೇಜಿನ ಪ್ರಾಂಶುಪಾಲ ಶ್ರೀನಾಥ ಪೈ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.

RELATED ARTICLES  ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದ ಶ್ರೀ ಬಸವರಾಜ ಸ್ವಾಮಿಗಳು.

ಶೈಕ್ಷಣಿಕ ಹಾಗೂ ಕ್ರೀಡಾ ವಿಭಾಗದಲ್ಲಿ ಕಾಲೇಜು ಮತ್ತು ವಿಶ್ವವಿದ್ಯಾಲಯ ಮಟ್ಟದಲ್ಲಿ ಸಾಧನೆಗೈದ ವಿದ್ಯಾಥಿಗಳನ್ನು ಪುರಸ್ಕರಿಸಲಾಯಿತು. ಈ ಸಂದರ್ಭದಲ್ಲಿ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಿದವು.