ಕುಮಟಾ: ದೇಶೀಯತೆಯನ್ನು ಮೆಲುಕು ಹಾಕುವಂತೆ ಮಾಡಲು ಹಾಗೂ ನಮ್ಮ ಪರಂಪರೆಯನ್ನು ಇಂದಿನ ವಿದ್ಯಾರ್ಥಿಗಳಿಗೆ ಪರಿಚಯಿಸಲು ಸಹಕಾರಿಯಾಗುವ ನಿಟ್ಟಿನಲ್ಲಿ ಡಾ. ಎ.ವಿ ಬಾಳಿಗಾ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಪರಂಪರಾ ಕೂಟವನ್ನು ಆಯೋಜಿಸಲಾಗಿತ್ತು.
ಕಾಲೇಜಿನ ವಿದ್ಯಾರ್ಥಿಗಳು ಸಾಂಪ್ರದಾಯಿಕ ಉಡುಗೆಗಳನ್ನು ಧರಿಸಿ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರದರ್ಶಿಸಿದರು. ವಿದ್ಯಾರ್ಥಿ ವಿದ್ಯಾರ್ಥಿನಿಯರು ವೇದಿಕೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ರ್ಯಾಂಪ್ ವಾಕ್ ನಡೆಸಿ ಗಮನ ಸೆಳೆದರು, ಇದೇ ಸಂದರ್ಭದಲ್ಲಿ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಸಂಪ್ರದಾಯ ಹಾಗೂ ಪರಂಪರೆಯ ಪರಿಚಯ ಮಾಡಿಸಲು ಸಂಸ್ಥೆಯ ಕಾರ್ಯ ಮೆಚ್ಚುಗೆ ಪಡೆಯಿತು.