ಕಾರವಾರ: ಸ್ಕ್ಯಾನಿಂಗ್ ಸೆಂಟರ್‍ಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಹಾಕಬೇಕು ಹಾಗೂ ಅಗತ್ಯ ಬಿದ್ದಾಗ ಅದರ ಪೂಟೇಜ್‍ಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಹರೀಶ್‍ಕುಮಾರ್ ಕೆ. ಸೂಚಿಸಿದ್ದಾರೆ.
ಭ್ರೂಣಲಿಂಗ ಪತ್ತೆ ನಿಷೇಧ ಕಾಯ್ದೆಯನ್ವಯ ಸ್ಕ್ಯಾನಿಂಗ್ ಸೆಂಟರ್‍ಗಳಲ್ಲಿ ಸಿಸಿಟಿವಿ ಅಳವಡಿಸುವುದು ಕಡ್ಡಾಯವಿರುತ್ತದೆ. ಆದರೆ ಕೆಲವು ಸ್ಕ್ಯಾನಿಂಗ್ ಸೆಂಟರ್‍ಗಳಲ್ಲಿ ಸಿಸಿಟಿವಿ ಕಾರ್ಯ ನಿರ್ವಹಿಸುತ್ತಿಲ್ಲ ಅಥವಾ ಇನ್ನಾವುದೋ ಸಬೂಬು ಹೇಳುತ್ತಿರುವುದು ಗಮನಕ್ಕೆ ಬಂದಿದ್ದು ಈ ಬಗ್ಗೆ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಸ್ಕ್ಯಾನಿಂಗ್ ಸೆಂಟರ್‍ಗಳಲ್ಲಿ ತಮ್ಮದೇ ಖರ್ಚಿನಲ್ಲಿ ಸಿಸಿಟಿವಿ ಅಳವಡಿಸಿ ನಿರ್ವಹಿಸುವುದು ಕಡ್ಡಾಯವಾಗಿರುತ್ತದೆ. ಒಂದೊಮ್ಮೆ ಸಿಸಿಟಿವಿ ಕಾರ್ಯನಿರ್ವಹಿಸುತ್ತಿಲ್ಲ ಎಂಬುದು ನಮ್ಮ ಗಮನಕ್ಕೆ ಬಂದರೆ ಸ್ಕ್ಯಾನಿಂಗ್ ಸೆಂಟರ್‍ನವರೇ ಕಾರ್ಯನಿರ್ವಹಿಸದಂತೆ ಮಾಡಿರಬಹುದೆಂದು ಪರಿಗಣಿಸಬೇಕಾಗುತ್ತದೆ. ಆದ್ದರಿಂದ ಜಿಲ್ಲೆ ಎಲ್ಲ ಸ್ಕ್ಯಾನಿಂಗ್ ಸೆಂಟರ್‍ಗಳು ಸಿಸಿಟಿವಿ ಕಡ್ಡಾಯವಾಗಿ ಅಳವಡಿಸಬೇಕು ಹಾಗೂ ಅವುಗಳು ಕಾರ್ಯನಿರ್ವಹಿಸಬೇಕು. ಸಂದರ್ಭ ಬಂದಾಗ ಪೂಟೇಜ್‍ಗಳನ್ನು ನೀಡಬೇಕಾಗುತ್ತದೆ ಎಂದು ಹೇಳಿದರು.
Source: Baada News