ಬೆಂಗಳೂರು : ರಾಜ್ಯದ ವಿವಿಧೆಡೆಗೆ  ನಿನ್ನೆ ಮಳೆಯಾಗಿದ್ದು, ವಿಜಯಪುರ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು-ಮಿಂಚು, ಆಲಿಕಲ್ಲು ಸಹಿತ ಮಳೆಯಾಗಿದೆ ಎಂದು ತಿಳಿದು ಬಂದಿದೆ. 

ನಿನ್ನೆ ಸಂಜೆ 6.30ರ ವೇಳೆಗೆ ಆರಂಭವಾದ ಮಳೆ ಅರ್ಧ ಗಂಟೆಗೂ ಅಧಿಕ ಕಾಲ ಸುರಿದಿದೆ. ವಿಜಯಪುರ ನಗರದ ಕೆಲವೆಡೆ ಭಾರೀ ಗಾತ್ರ ಆಲಿಕಲ್ಲುಗಳು ಬಿದ್ದಿದ್ದು, ಜನ ಅಚ್ಚರಿ ವ್ಯಕ್ತಪಡಿಸಿದರೆ, ಮಕ್ಕಳು ಆಲಿಕಲ್ಲುಗಳನ್ನು ಸಂಗ್ರಹಿಸಿ ಸಂತಸ ಪಟ್ಟರು ಎನ್ನಲಾಗಿದೆ.

RELATED ARTICLES  ಹಿರಿಯ ನಟಿ ಬಿ.ವಿ. ರಾಧಾ ಹೃದಯಾಘಾತದಿಂದ ನಿಧನ

ಬಬಲೇಶ್ವರ ಹಾಗೂ ತಿಕೋಟಾ ತಾಲೂಕಿನ ಗ್ರಾಮಗಳಲ್ಲಿ ಬಿರುಗಾಳಿ ಸಮೇತ ಮಳೆ ಸುರಿದಿದೆ. ಬೀದರ್ ಜಿಲ್ಲೆಯ ಬಸವ ಕಲ್ಯಾಣ ತಾಲೂಕಿನ ಸಸ್ತಾಪೂರ ಬಂಗ್ಲಾ ಬಳಿಯ ಆಟೋನಗರ ದಲ್ಲಿ ಆಲಿಕಲ್ಲು ಸಮೇತ ಮಳೆಯಾಗಿದ್ದರೆ, ಕಲಬುರಗಿ ಜಿಲ್ಲೆಯ ಸೇಡಂ ಹಾಗೂ ಯಾದಗಿರಿ ಜಿಲ್ಲೆಯ ಗುರುಮಠಕಲ್, ಕೆಂಭಾವಿ ಸೇರಿದಂತೆ ವಿವಿಧೆಡೆ ಸಾಧಾರಣ ಮಳೆಯಾಗಿದೆ ಎಂದು ವರದಿಯಾಗಿದೆ.

RELATED ARTICLES  ವಿಭಿನ್ನ ಪಾತ್ರದಲ್ಲಿ ಅಭಿನಯಿಸಲು ಮುಂದಾಗಿದ್ದಾರೆ ಮಾಲಾಶ್ರೀ!