ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಎಂದಿನಂತೆ ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಮಾ.1ರಿಂದ 18ರ ವರೆಗೆ ನಡೆಸಲಾಗಿರುವ 2019ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಇಲಾಖೆ ನಿರ್ದೇಶಕಿ ಸಿ.ಶಿಖಾ ಸುದ್ದಿಗೋಷ್ಠಿ ನಡೆಸಿ ಪ್ರಕಟಿಸಿದ್ದಾರೆ. ಮಧ್ಯಾಹ್ನ 12 ಗಂಟೆಗೆ ವೆಬ್‌ಸೈಟ್‌ನಲ್ಲಿ ಮತ್ತು ಏ.16ರಂದು ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ.
ಒಟ್ಟು 61.73 % ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ. ಶೇ. 68.24 ಬಾಲಕಿಯರು ಹಾಗೂ ಶೇ. 55.29 ಬಾಲಕರು ತೇರ್ಗಡೆ ಹೊಂದಿದ್ದಾರೆ. ಇನ್ನು ಉಡುಪಿ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದ್ದರೆ, ದ್ವಿತೀಯ ಸ್ಥಾನ ದಕ್ಷಿಣ ಕನ್ನಡದ ಪಾಲಾಗಿದೆ, ಮೂರನೇ ಸ್ಥಾನ ಮೂರನೇ ಸ್ಥಾನದಲ್ಲಿದೆ. ಚಿತ್ರದುರ್ಗ ಕೊನೆಯ ಸ್ಥಾನದಲ್ಲಿದೆ.
ದ್ವಿತೀಯ ಪಿಯುಸಿ ಫಲಿತಾಂಶವು ಸೋಮವಾರ ಮಧ್ಯಾಹ್ನ 12 ಗಂಟೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ವೆಬ್‌ಸೈಟ್‌ನಲ್ಲಿ ಪ್ರಕಟವಾಗಲಿದೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಬಳಸಿ ಇಲಾಖೆ ವೆಬ್‌ಸೈಟ್pue.kar.nic.in/ www. karresults.nic.in ನಲ್ಲಿ ಫಲಿತಾಂಶ ವೀಕ್ಷಿಸಬಹುದು.
Source: Assianet