ಉಡುಪಿ: ಖಾಸಗಿ ಕಾಲೇಜೊಂದರ ವಿದ್ಯಾರ್ಥಿನಿ ಪಿಯುಸಿ ಫಲಿತಾಂಶದಲ್ಲಿ ಅನುತ್ತೀರ್ಣವಾದ ಕಾರಣ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಹೆಬ್ರಿಯ ನಡುಮನೆ ನಿವಾಸಿ ಪ್ರಜ್ಞಾ (18) ಎಂದು ಗುರುತಿಸಲಾಗಿದೆ.
ಕನ್ನಡ ಪತ್ರಿಕೆಯಲ್ಲಿ ಅನುತ್ತೀರ್ಣವಾದ ಕಾರಣ ವಿದ್ಯಾರ್ಥಿನಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.
ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಮುಂದುವರಿದಿದೆ…