ಕುಮಟಾ: ಏ.23 ರಂದು ನಡೆಯಲಿರುವ ಲೋಕಸಭಾ ಚುನಾವಣೆಗೆ ತಾಲೂಕಿನ ಮತಗಟ್ಟೆಗಳಿಗೆ ಮತಯಂತ್ರಗಳ ಹಂಚಿಕೆ ಹಾಗೂ ಸಿಬ್ಬಂದಿಗಳ ರವಾನೆಯ ಕಾರ್ಯ ಸೋಮವಾರ ನಡೆಯಿತು.
ಉತ್ತರ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಮತದಾನವು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6
ಗಂಟೆಯವರೆಗೆ ಮತದಾನ ನಡೆಯಲಿದೆ. ಮತದಾನದ ದಿನದಂದು ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ ಮತ್ತು ಸರ್ಕಾರಿ ಸೌಮ್ಯದ ಸಂಸ್ಥೆಗಳಿಗೆ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ. ಅದೇ ರೀತಿ ಖಾಸಗಿ ಸಂಸ್ಥೆ, ಕೈಗಾರಿಕೆ ಮತ್ತು ವಾಣಿಜ್ಯ ಉದ್ಯಮಗಳಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರಿಗೆ ಸಹ
ಮತದಾನ ದಿನದಂದು ವೇತನ ಸಹಿತ ರಜೆ ಎಂದು ಘೋಷಿಸಲು ಸಂಬಂಧಿಸಿದವರಿಗೆ ಪ್ರಜಾ ಪ್ರತಿನಿಧಿ ಕಾಯ್ದೆ 1951 ಕಲಂ 135ಬಿ ರಡಿಯಲ್ಲಿ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಮತಗಟ್ಟೆ ಅಧಿಕಾರಿಗಳಿಗೆ ನಿರ್ಧಿಷ್ಟಪಡಿಸಿದ ಮತಗಟ್ಟೆಗಳಿಗೆ ತಲುಪಲು ಒಟ್ಟು 162 ಕೆಎಸ್‌ಆರ್‌ಟಿಸಿ ಬಸ್ಸುಗಳು, 204 ಜೀಪುಗಳು ಮತ್ತು ಒಂದು ದೋಣಿಯ ವ್ಯವಸ್ಥೆ ಕಲ್ಪಿಸಲಾಗಿದೆ. ಮತಗಟ್ಟೆ ಸಿಬ್ಬಂದಿಗಳಿಗೆ ಯಾವುದೇ ರೀತಿಯ ಅನಾನುಕೂಲತೆ ಉಂಟಾಗದಂತೆ ನೋಡಿಕೊಳ್ಳಲು ಜಿಲ್ಲಾ ನೋಡಲ್ ಅಧಿಕಾರಿಯನ್ನು ನೇಮಿಸಲಾಗಿದೆ