ಹೊನ್ನಾವರ: ತಾಲೂಕಿನ ಮೂಡ್ಕಣಿಯಲ್ಲಿ ಮೇ.5 ರಂದು ಅದ್ದೂರಿಯಾಗಿ ಆಯೋಜನೆಗೊಂಡಿರುವ ಹೊನ್ನಾವರ 9ನೇ ತಾಲೂಕು ಸಾಹಿತ್ಯ ಸಮ್ಮೇಳನಾಧ್ಯಕ್ಷರಾದ ಕವಿ ಪ್ರೊ.ಶ್ರೀಪಾದ ಹೆಗಡೆ ಕಣ್ಣಿ ಅವರಿಗೆ ತಾಲೂಕು ಕಸಾಪ ವತಿಯಿಂದ ಅಧಿಕೃತ ಆಮಂತ್ರಣ ನೀಡಿ ಆಹ್ವಾನಿಸಲಾಯಿತು.

ಉತ್ತರಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಅರವಿಂದ ಕರ್ಕಿಕೋಡಿ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಗರಾಜ ಹೆಗಡೆ ಅಪಗಾಲ ಇವರು ಕಸಾಪ ಸದಸ್ಯರೊಡಗೂಡಿ ಕಣ್ಣಿಯವರ ಮನೆಗೆ ತೆರಳಿ ಗೌರವಪೂರ್ವಕವಾಗಿ ಶಾಲು ಹೊದಿಸಿ ಫಲತಾಂಬೂಲ ನೀಡಿ ಸಮ್ಮೇಳನಕ್ಕೆ ಅಧಿಕೃತವಾಗಿ ಆಹ್ವಾನಿಸಿದರು.

RELATED ARTICLES  ಸ್ವರ ಸಂಗಮದ 20ನೇ ವಾರ್ಷಿಕೋತ್ಸವ ಹಾಗೂ ಸನ್ಮಾನ ಸಮರಂಭ ಸಂಪನ್ನ

ಈ ಸಂದರ್ಭದಲ್ಲಿ ತಾಲೂಕು ಕಸಾಪ ಖಜಾಂಚಿ ಪ್ರಶಾಂತ ಮೂಡಲಮನೆ, ಪ್ರಾಚಾರ್ಯ ಜಿ.ಎಸ್.ಹೆಗಡೆ, ಯುವ ಒಕ್ಕೂಟದ ಅಧ್ಯಕ್ಷ ವಿನಾಯಕ ಬಿ. ನಾಯ್ಕ, ಸಮ್ಮೇಳನದ ಸ್ವಾಗತ ಸಮಿತಿ ಉಪಾಧ್ಯಕ್ಷ ಕಮಲಾಕರ ಅಂಬಿಗ, ಎಂ.ಎಸ್.ಶೋಭಿತ್ ಉಪಸ್ಥಿತರಿದ್ದರು.

RELATED ARTICLES  ಪ್ರವಾಹದ ಅನಾಹುತಕ್ಕೆ ಸ್ಪಂದಿಸದ ಕೇಂದ್ರ ಸರ್ಕಾರ : ಕುಮಟಾದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ.