ಶಿರಸಿ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಶವ ಪತ್ತೆಯಾಗಿದ್ದು ಇದೀಗ ಈ ಸುದ್ದಿ ನಗರದ ಜನರನ್ನು ಭಯಗೊಳಿಸಿದೆ.
ಶಿರಸಿ ನಗರದ ಹೊರಭಾಗದ ಬಯಲಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಯಾರೋ ಕೊಲೆ ಮಾಡಿ ಸುಟ್ಟು ಬಿಸಾಡಿದ್ದಾರೆ ಎಂದು ಶಂಕಿಸಲಾಗಿದೆ.
ತಾಲೂಕಿನ ಶ್ರೀ ರಾಮ ಕಾಲೊನಿ ವಾಸಿ ಜಾಕಿರ್ ಖಾನ್ ಮೊಹದ್ದಿನ್ ಖಾನ್ ಪಟೇಲ್ ಮೃತ ವ್ಯಕ್ತಿಯಾಗಿದ್ದಾನೆ. ಬೆಂಕಿ ಹಚ್ಚಿ ಸುಟ್ಟು ಶವ ತಂದು ಎಸೆದ ಅನುಮಾನವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.
ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ವ್ಯಕ್ತಿಯು ಹಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದು, ಮಾನಸಿಕವಾಗಿ ಜರ್ಜರಿತನಾಗಿದ್ದನೆಂದೂ ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ಪ್ರಕರಣದ ಸತ್ಯಾಸತ್ಯತೆ ಪೋಲೀಸ್ ತನಿಖೆಯಿಂದ ಹೊರಬರಬೇಕಿದೆ.