ಭಟ್ಕಳ: ಇಲ್ಲಿನ ಪರವರ್ಗ ಗ್ರಾಮದ ಗಣೇಶ ನಗರ ವ್ಯಾಪ್ತಿಯಲ್ಲಿ ವ್ಯಕ್ತಿಯೋರ್ವ ಮನೆಯಿಂದ ಬೊಲೇರೋ ವಾಹನದ ಮೇಲೆ ಸಂಗ್ರಹಿಸಿಟ್ಟ ಅಕ್ಕಿ ಅಕ್ರಮವಾಗಿ ತುಂಬುತ್ತಿದ್ದ ವೇಳೆ ಸಾರ್ವಜನಿಕರ ದೂರಿನ್ವಯ ಆಹಾರ ನಿರೀಕ್ಷಕರು ಹಾಗೂ ಕಂದಾಯ ಅಧಿಕಾರಿಗಳು ದಾಳಿ ನಡೆಸಿದ್ದು ಈ ವೇಳೆ ಚಾಲಕ ಪರಾರಿಯಾಗಿದ್ದು ವಾಹನ ಸಮೇತ ಅಕ್ಕಿಯನ್ನು ವಶಕ್ಕೆ ಪಡೆದುಕೊಂಡ ಬಗ್ಗೆ ವರದಿಯಾಗಿದೆ.
ಮಹ್ಮದ್ ಯುಸೂಬ್ ಹಮ್ಮಿದ್ ಎಂಬುವವರ ಮನೆಯ ಶೆಡ್ ನಲ್ಲಿ ಅಕ್ರಮವಾಗಿ ಅಕ್ಕಿಯನ್ನು ಸಂಗ್ರಹಿಸಿದ್ದರು ಎಂಬ ಆರೋಪ ಕೇಳಿಬಂದಿದ್ದು
ಅಕ್ಕಿಯನ್ನು ಬೋಲೆಯೋ ಪಿಕಪ್ ತುಂಬುತ್ತಿದ್ದ ವೇಳೆ ಅಲ್ಲಿನ ಸಾರ್ವಜನಿಕರು ತಹಸೀಲ್ದಾರ ಕಛೇರಿಗೆ ದೂರವಾಣಿ ಕರೆ ಮಾಡಿ ದೂರು ನೀಡಿದ್ದಾರೆ.
ತಹಸೀಲ್ದಾರ ಎನ್.ಬಿ.ಪಾಟೀಲ್ ಅವರ ಆದೇಶದ ಮೇರೆಗೆ ಕಾರ್ಯಪ್ರವೃತ್ತರಾದ ಆಹಾರ ನಿರೀಕ್ಷಕರು ಹಾಗೂ ಕಂದಾಯ ಅಧಿಕಾರಿಗಳು ದಿಡೀರ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ 50 ಕೆ.ಜಿ.ಯ 60 ಚೀಲದ ಒಟ್ಟು 31 ಕ್ವಿಂಟಾಲ್ ಅಕ್ಕಿಯನ್ನು ವಶಕ್ಕೆ ಅಧಿಕಾರಿಗಳು ನಗರ ಠಾಣೆಗೆ ಪೊಲೀಸರಿಗೆ ಒಪ್ಪಿಸಿದ್ದು, ವಾಹನದ ಚಾಲಕ ಪರಾರಿಯಾಗಿದ್ದಾನೆ.
ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.