ಶ್ರೀ ಸಿದ್ಧಿವಿನಾಯಕ ಪ್ರೌಢಶಾಲೆ ಗೋಳಿ ಇದರ 2018ರ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಶೇಕಡಾ 91.84%
ನಮ್ಮ ಪ್ರೌಢಶಾಲೆಯಿಂದ 2019ರ ಎಸ್.ಎಸ್.ಎಲ್.ಸಿ ಪರೀಕೆಗೆ ಕುಳಿತ 49 ವಿದ್ಯಾರ್ಥಿಗಳಲ್ಲಿ 45 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇಕಡಾ 91.84% ಆಗಿರುತ್ತದೆ. ಕುಮಾರಿ ಶ್ರೀಧರಿ ಮಹಾಬಲೇಶ್ವರಿ ಹೆಗಡೆ ಗೋಳಿ ಶೇ 98.84 ಪ್ರತಿಶತ ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನವನ್ನು, ಕುಮಾರಿ ನಿಖಿತಾ ಪ್ರಶಾಂತ ಹೆಗಡೆ ಹೊಸ್ಮನೆ ಇವಳು ಶೇ 96.96 ಪ್ರತಿಶತ ಅಂಕ ಪಡೆದು ಶಾಲೆಗೆ ದ್ವಿತೀಯ ಸ್ಥಾನವನ್ನು, ಕುಮಾರಿ ಭೂಮಿಕಾ ರಾಜಾರಾಮ ಹೆಗಡೆ ಕೊಡಗೀಪಾಲ್ ಇವಳು ಶೇ 96.00ಪ್ರತಿಶತ ಅಂಕ ಪಡೆದು ಶಾಲೆಗೆ ತೃತೀಯ ಸ್ಥಾನವನ್ನು ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾರೆ.
14 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ
22 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ
09 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ.
ಈ ಕುರಿತು ಆಡಳಿತ ಮಂಡಳಿಯ ಅಧ್ಯಕ್ಷರು ಸಾಮಾಜಿಕ ಚಿಂತಕರೂ ಆದ ಶ್ರೀ ವಿಶ್ವನಾಥ ಶರ್ಮಾ ನಾಡಗುಳಿ ಮತ್ತು ಆಡಳಿತ ಮಂಡಳಿಯ ಸದಸ್ಯರುಗಳು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ. ಪ್ರೌಢಶಾಲೆಯ ಮುಖ್ಯಾಧ್ಯಾಪಕರಾದ ಶ್ರೀ ಎಂ.ಜಿ.ಹೆಗಡೆ ಮತ್ತು ಶಿಕ್ಷಕ-ಸಿಬ್ಬಂದಿ ವರ್ಗದವರು ಹರ್ಷವನ್ನು ವ್ಯಕ್ತಪಡಿಸಿರುತ್ತಾರೆ.