ಹಿರಿಯ ರಂಗಕರ್ಮಿ ಮಾಸ್ಟರ್​ ಹಿರಣ್ಣಯ್ಯ ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಬಿಜಿಎಸ್​​​ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.

ಹಿರಣ್ಣಯ್ಯನವರು ರಾಜಕೀಯ ವಿಡಂಬನೆಗಳಿಗೆ ಹೆಸರುವಾಸಿಯಾಗಿದ್ದರು. ನಾಟಕ, ಹಲವು ಚಿತ್ರಗಳಲ್ಲಿ ನಟಿಸಿದ್ದರು. ‘ಲಂಚವತಾರ’ ನಾಟಕ ಮೂಲಕ ಮನೆಮಾತಾಗಿದ್ದರು. ಕನ್ನಡ ರಂಗಭೂಮಿಯ ಪ್ರತಿಭಾವಂತ ಮಾಸ್ಟರ್‌ ಹಿರಣ್ಣಯ್ಯ.

ವೃತ್ತಿರಂಗಭೂಮಿ ಚರಿತ್ರೆಯಲ್ಲಿ ಮೈಲಿಗಲ್ಲು ‘ಲಂಚಾವತಾರ’. 10 ಸಾವಿರಕ್ಕೂ ಅಧಿಕ ಪ್ರದರ್ಶನ ಕಂಡ ನಾಟಕ ‘ಲಂಚಾವತಾರ’ “ಭ್ರಷ್ಟಾಚಾರ’, “ಅತ್ಯಾಚಾರ’, “ಕಪಿಮುಷ್ಟಿ’, “ನಡುಬೀದಿ ನಾರಾಯಣ’ ನಾಟಕಗಳಲ್ಲಿ ಬಣ್ಣ ಹಚ್ಚಿದ್ದರು.

RELATED ARTICLES  ಅಕ್ರಮವಾಗಿ ಇಟ್ಟಿದ್ದ 20 ಲಕ್ಷಕ್ಕೂ ಹೆಚ್ಚು ಹಣ ಮತ್ತು ಅಪಾರ ಪ್ರಮಾಣದ ಮದ್ಯ ವಶ.

ಲಂಚಾವತರ ಮೂಲಕ ಮನೆಮಾತಾಗಿದ್ದ ಹಿರಣಯ್ಯ ಅನಾರೋಗ್ಯದಿಂದಾಗಿ ತೆರೆಯ ಹಿಂದೆ ಸರಿದಿದ್ದರು. ಫೆಬ್ರವರಿ 15, 1934ರಂದು ಮೈಸೂರಿನಲ್ಲಿ ಮಾಸ್ಟರ್ ಹಿರಣಯ್ಯ ಜನಿಸಿದ್ದರು. ಅವರ ಮೂಲ ಹೆಸರು ನರಸಿಂಹಮೂರ್ತಿ. ಕಲ್ಚರ್ಡ್ ಕಮೆಡಿಯನ್ ಎಂದು ಪ್ರಖ್ಯಾತರಾಗಿದ್ದ ಕೆ. ಹಿರಣ್ಣಯ್ಯ ಮತ್ತು ಶಾರದಮ್ಮ ದಂಪತಿಗಳ ಒಬ್ಬನೇ ಮಗ. ಓದಿದ್ದು ಇಂಟರ್ ಮೀಡಿಯೆಟ್ ವರೆಗೆ. 1952ರಲ್ಲಿ ತಂದೆಯೊಂದಿಗೆ ಕೂಡಿಕೊಂಡು ಅವರಿಂದಲೇ ರಂಗಶಿಕ್ಷಣ ಪಡೆದಿದ್ದರು.

ಮಾಸ್ಟರ್ ಹಿರಣ್ಣಯ್ಯನವರು ಬಾಲ್ಯದಲ್ಲಿರುವಾಗ ಅವರ ತಂದೆ ಮದರಾಸಿನಲ್ಲಿ ಬದುಕನ್ನರಸಿ ತಮ್ಮ ಕುಟುಂಬ ಸಮೇತರಾಗಿ ವಾಸವಾಗಿದ್ದರು. ಹೀಗಾಗಿ ಅಲ್ಲಿ ಅವರಿಗೆ ತಮಿಳು, ತೆಲುಗು ಮತ್ತು ಇಂಗ್ಲಿಷ್ ಭಾಷೆಗಳ ಅಭ್ಯಾಸವಾಯಿತು. ಜೊತೆ ಜೊತೆಗೆ ಮನೆಯಲ್ಲಿ ಕನ್ನಡದ ಬಾಯಿಪಾಠ ಮತ್ತು ಸಂಸ್ಕೃತದ ಸ್ತೋತ್ರ ಪಾಠ ಕೂಡಾ ನಡೆಯಿತು. ನಂತರದಲ್ಲಿ ಮೈಸೂರಿಗೆ ಬಂದು ಸೇರಿದ್ದು ಬನುಮಯ್ಯ ಮಾಧ್ಯಮಿಕ ಶಾಲೆ. `ಸಾಧ್ವಿ’, `ಮೈಸೂರು ಪತ್ರಿಕೆ’ಯನ್ನು ಮನೆ ಮನೆಗೆ ಹಂಚಿ ಆ ಸಂಪಾದನೆಯಿಂದ ಶಾಲಾ ಪರೀಕ್ಷೆಗಳ ಶುಲ್ಕಕ್ಕೆ ದಾರಿ ಮಾಡಿಕೊಂಡಿದ್ದರು.

RELATED ARTICLES  ಭಾವಕ್ಕೂ ಸಾಕ್ಷಿ ಬೇಕು ಎನ್ನುತ್ತಿರುವ ಕಾಲವಿದು : ಶ್ರೀಶ್ರೀರಾಘವೇಶ್ವರಭಾರತೀ ಶ್ರೀ