ಕಾರವಾರ: ಜಿಲ್ಲೆಯ ಭಟ್ಕಳ ಪುರಸಭೆ, ಹೊನ್ನಾವರ ಮತ್ತು ಸಿದ್ದಾಪುರ ಪಟ್ಟಣ ಪಂಚಾಯತ್ ಸಂಸ್ಥೆಗಳಿಗೆ ಕೌನ್ಸಿಲರಗಳ ಸ್ಥಾನ ತುಂಬಲು ಚುನಾವಣಾ ಅಧಿಸೂಚನೆ ಪ್ರಕಟಿಸಲಾಗಿದೆ.
ಮೇ 9 ರಂದು ಚುನಾವಣೆ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ನಾಮಪತ್ರಗಳನ್ನು ಸಲ್ಲಿಸಲು ಮೇ. 16 ಕೊನೆಯ ದಿನ. ಮೇ. 17 ರಂದು ನಾಮಪತ್ರಗಳನ್ನು ಪರಿಶೀಲಿಸಲಾಗುವುದು. ಮೇ 20 ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ.
ಮೇ. 29 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ.ಮೇ. 30 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮರುಮತದಾನ ಅವಶ್ಯವಿದ್ದರೆ ಮರುಮತದಾನ ನಡೆಸಲಾಗುವುದು. 31 ರಂದು ಬೆಳಿಗ್ಗೆ 8 ಗಂಟೆಯಿಂದ ತಾಲೂಕು ಕೇಂದ್ರ ಸ್ಥಳಗಳಲ್ಲಿ ಮತಎಣಿಕೆ ನಡೆಯಲಿದೆ ಎಂದು ಉತ್ತರಕನ್ನಡ ಜಿಲ್ಲಾಧಿಕಾರಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.