ಶಿರಸಿ: ಚುನಾವಣಾ ಮಾರನೇ ದಿನವೇ ನಡೆದು ಜನರಲ್ಲಿ ಭಯ ಹುಟ್ಟಿಸಿದ್ದ ಬಿಜೆಪಿ ಮುಖಂಡ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಉಪಾಧ್ಯಕ್ಷ ಅನೀಸ್ ತಹಶೀಲ್ದಾರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸರು ಚುರುಕಿನ ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಭಟ್ಕಳದ ಇಬ್ಬರು ಆರೋಪಿಗಳನ್ನು ಶಿರಸಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಭಟ್ಕಳದ ಮಹಮ್ಮದ್ ತೌಫಿಕ್, ಹಾಗೂ ಅಬ್ದುಲ್ ಕರೀಂ ಬಂಧಿತ ಆರೋಪಿಗಳಾಗಿದ್ದಾರೆ.
ಇಲ್ಲಿಯವರೆಗೆ ಅನೀಸ್ ಪ್ರಕರಣಕ್ಕೆ ಸಂಭಂದಿಸಿದಂತೆ 11 ಆರೋಪಿಗಳನ್ನು ಬಂಧಿಸಿದ್ದು, ಬಂಧಿತರನ್ನು ತೀವ್ರವಾದ ತನಿಖೆಗೆ ಒಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಪೋಲೀಸರು ತನಿಖೆ ಮುಂದುವರೆಸಿದ್ದಾರೆ.