Home Information ಯೋಧರ ಮಕ್ಕಳಿಗೆ 2019-20ನೇ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿ ನಿಲಯ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಯೋಧರ ಮಕ್ಕಳಿಗೆ 2019-20ನೇ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿ ನಿಲಯ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಕಾರವಾರ; ಮಾಜಿ ಸೈನಿಕರ ಮತ್ತು ಯುದ್ಧದಲ್ಲಿ ಮಡಿದ ಯೋಧರ ಮಕ್ಕಳಿಗೆ 2019-20ನೇ ಶೈಕ್ಷಣಿಕ ವರ್ಷಕ್ಕೆ  ಮಿಲಟರಿ ಬಾಲಕರ ವಿದ್ಯಾರ್ಥಿ ನಿಲಯ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. 


ಕಾರವಾರ ವ್ಯಾಪ್ತಿಗೊಳಪಡುವ ವಿದ್ಯಾ ಸಂಸ್ಥೆಗಳಲ್ಲಿ 5ನೇ ತರಗತಿಯಿಂದ ಪಿ ಯು ಸಿ, ಪಾಲಿಟೆಕ್ನಿಕ್ ಹಾಗೂ ಐ ಟಿ ಐ ತರಗತಿಗಳಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಮೇ 20 ಕೊನೆಯ ದಿನವಾಗಿರುತ್ತದೆ.  


ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ  08382-226538,  ಉಪ ನಿರ್ದೇಶಕರ ಕಾರ್ಯಾಲಯ, ಸೈನಿಕರ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಕಾರವಾರ ಇವರನ್ನು ಸಂಪರ್ಕಿಸಬಹುದು.