ಭಾರತ ಸಂಸ್ಕೃತಿಯ ತವರು ಇಲ್ಲಿನ ಪ್ರತಿಯೊಂದು ಆಚರಣೆಗೂ ಅದರದೆ ಆದ ವಿಶೇಷತೆಯಿದೆ. ಅಲ್ಲದೆ ಸಂಭಂದಗಳಿಗೆ ಮಹತ್ವಕೊಡೋ ಈ ನಾಡಲ್ಲಿ ಸಂಬಂಧವನ್ನು ಗಟ್ಟಿಯಾಗಿರಿಸಲು ಅನೇಕ ಹಿನ್ನಲೆಯನ್ನು ಆಧಾರವಾಗಿಟ್ಟುಕೊಂಡು ಹಬ್ಬವನ್ನು ಆಚರಿಸಲಾಗುತ್ತದೆ. ಅದೇ ರೀತಿ ಒಡಹುಟ್ಟಿದವರ ಹಬ್ಬವಾದ ರಕ್ಷಾಬಂಧನವು ಸಹ ಐತಿಹಾಸಿಕ ಕಥೆಗಳನ್ನೊಳಗೊಂಡಿದೆ. ಅಂದು ಯುದ್ಧದಲ್ಲಿ ಇಂದ್ರನು ರಾಕ್ಷಸರ ಜೊತೆ ಸೋಲುವ ಕ್ಷಣ ಬಂದಾಗ ಇಂದ್ರನು ಬೃಹಸ್ಪತಿಯ ಮೊರೆ ಹೋಗುತ್ತಾನಂತೆ ಬೃಹಸ್ಪತಿಯ ಸಲಹೆಯ ಮೇರೆಗೆ ಶ್ರಾವಣ ಹುಣ್ಣಿಮೆಯಂದು ರೇಷ್ಮೆ ದಾರವನ್ನು ಇಂದ್ರಾಣಿಯು ಇಂದ್ರನ ಕೈಗೆ ಕಟ್ಟುತ್ತಾಳೆ. ಇದರ ಪರಿಣಾಮವೋ ಏನೋ ಇಂದ್ರನು ಯುದ್ಧದಲ್ಲಿ ಜಯ ಹೊಂದುತ್ತಾನಂತೆ. ಇದು ಪೌರಾಣಿಕ ಕಥೆ ಈ ಹಿನ್ನಲೆಯಿಂದಲೇ ಈ ಹಬ್ಬವನ್ನು ಆಚರಿಸಲಾಗುತ್ತದೆ ಎಂಬುವುದು ಪ್ರತೀತಿ.

RELATED ARTICLES  ಹೊನ್ನಾವರ ಕಾಸರಕೋಡ ಸಮೀಪ ಭೀಕರ ಅಪಘಾತ

ತಂಗಿ ತನ್ನ ಅಣ್ಣನ ಯಶಸ್ಸು, ಶ್ರೇಯೋಭಿವೃದ್ದಿ ಹಾಗೇನೇ ಅವನ ಬಾಳಲ್ಲಿ ನೆಮ್ಮದಿಯನ್ನು ಕರುಣಿಸಿ ರಕ್ಷಿಸು ಎಂದು ಹಾರೈಸುವ ಮುಖಾಂತರ ರಾಖಿಯನ್ನು ಕಟ್ಟುವುದು ವಾಡಿಕೆ. ಶ್ರಾವಣ ಹುಣ್ಣಿಮೆಯಂದು ಬರೋ ಈ ಹಬ್ಬ ಅಣ್ಣ-ತಂಗಿಯ ಸಂಭಂದಕ್ಕೆ ಅರ್ಥ ಕಲ್ಪಿಸೋ ಪವಿತ್ರವಾದ ದಿನ. ಹಿಂದೆ ಉತ್ತರ ಭಾರತದಲ್ಲಿ ಹೆಚ್ಚು ಪ್ರಚಲಿತದಲ್ಲಿದ್ದ ಈ ಹಬ್ಬವನ್ನು ಇತ್ತೀಚೆಗೆ ದಕ್ಷಿಣ ಭಾರತದಲ್ಲಿಯೂ ಆಚರಿಸಲಾಗುತ್ತಿದೆ. ಭಾರತದೆಲ್ಲೆಡೆ ಯಾವುದೇ ಜಾತಿ ಭೇದವಿಲ್ಲದೆ ಎಲ್ಲಾ ಜನಾಂಗದವರು ಈ ಹಬ್ಬವನ್ನು ಅತೀ ಸಂಭ್ರಮದಿಂದ ಆಚರಿಸೋದೇ ಈ ದಿನದ ವಿಶೇಷ.

RELATED ARTICLES  ಭೀಕರ ಅಪಘಾತ : ಅಲೋಕ ಭಟ್ ಸಾವು.

ಹೊನ್ನಾವರ ತಾಲೂಕಿನ ಅಗ್ರಹಾರದ ಶ್ರೀ ಗೋಪಾಲಕೃಷ್ಣ ದೇವಾಲಯದಲ್ಲಿ ಹಿಂದು ಪರ ಸಂಘಟನೆಯವರು ಈ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿ ಭ್ರಾತೃತ್ವ ಭಾವ ಮೆರೆದರು.