ಕಾರವಾರ: ಉತ್ತರ ಕನ್ನಡ ಜಿಲ್ಲೆಯ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿನಾಂಕ 29-05-2019ರಂದು ಮತದಾನ ನಡೆಯಲಿದ್ದು ಅದರ ಹಿಂದಿನ ದಿನ ಅಂದರೆ ದಿನಾಂಕ 28-05-2019ರಂದು ಬೆಳಿಗ್ಗೆ 7ಗಂಟೆಯಿಂದ ದಿನಾಂಕ 29-05-2019 ಮಧ್ಯರಾತ್ರಿವರೆಗೆ ಚುನಾವಣೆ ನಡೆಯುವ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಗಡಿಯಿಂದ ಮೂರು ಕಿ.ಮೀ. ಪರಿದಿಯಲ್ಲಿ ಮದ್ಯ ಮಾರಾಟ ಹಾಗೂ ಸಾಗಾಟವನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಹರೀಶ್‍ಕುಮಾರ್ ಕೆ. ಆದೇಶಿಸಿದ್ದಾರೆ.
ಭಟ್ಕಳ ಪುರಸಭೆ, ಹೊನ್ನಾವರ ಹಾಗೂ ಸಿದ್ದಾಪುರ ಪಟ್ಟಣ ಪಂಚಾಯ್ತಿ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುತ್ತಿದ್ದು ಚುನಾವಣೆ ಸಮಯದಲ್ಲಿ ಶಾಂತಿ ಸುವ್ಯವಸ್ಥೆ ದೃಷ್ಟಿಯಿಂದ ಈ ಆದೇಶ ನೀಡಲಾಗಿದ್ದು ಕಾರವಾರ ಅಬಕಾರಿ ಉಪ ಅಯುಕ್ತರು ಈ ಆದೇಶವನ್ನು ನಿಷೇಧಾಜ್ಞೆ ಜಾರಿಗೊಳಿಸುವಂತೆ ಅವರು ಆದೇಶದಲ್ಲಿ ತಿಳಿಸಿದ್ದಾರೆ.