ಕಾರವಾರ:ಲೋಕಸಭಾ ಚುನಾವಣೆ ಮುಕ್ತಾಯಗೊಂಡು ಮತ ಎಣಿಕೆ ಕಾರ್ಯಕ್ಕೆ ದಿನಗಣನೆ ಪ್ರಾರಂಭವಾಗಿದೆ. ಮತ ಎಣಿಕೆ ಸಂಬಂಧ ಇಲಾಖೆ ಅಧಿಕೃತ ಮಾಹಿತಿ ನೀಡಿದ್ದು ಮೇ .22ರ ರಾತ್ರಿ 12 ರಿಂದ ಮೇ. 24 ರ ರಾತ್ರಿ 12 ರವರೆಗೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ದಂಡ ಪ್ರಕ್ರಿಯಾ ಸಂಹಿತೆ ಕಲಂ 144ರ ಅನ್ವಯ ನಿಷೇಧಾಜ್ಞೆ ಆದೇಶವನ್ನು ಜಿಲ್ಲಾ ಚುನಾವಣಾಧಿಕಾರಿ ಡಾ. ಹರಿಶ್‌ಕುಮಾರ್ ಕೆ. ಹೊರಡಿಸಿದ್ದಾರೆ.

ಉತ್ತರ ಕನ್ನಡ ಲೋಕಸಭಾ ಚುನಾವಣೆ ಮತ ಎಣಿಕೆ ಮೇ 23ರಂದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಡಾ ಎ. ವಿ. ಬಾಳಿಗಾ ಕಾಲೇಜಿನಲ್ಲಿ ನಡೆಯಲಿದೆ. ಮತ ಎಣಿಕೆ ಕಾರ್ಯದ ನಂತರ ವಿಜಯಿಯಾದ ಅಭ್ಯರ್ಥಿಗಳು ತಮ್ಮ ಬೆಂಬಲಿಗರೊಂದಿಗೆ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸುತ್ತಾ ಮೆರವಣಿಗೆಯಲ್ಲಿ ಸಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯ ಕೆಲವು ತಾಲೂಕುಗಳು ಕೋಮು ಸೂಕ್ಷ್ಮ ಪ್ರದೇಶಗಳಾಗಿರುವುದರಿಂದ ಸಮಾಜ ಘಾತುಕ ಶಕ್ತಿಗಳು ಶಾಂತಿ ಭಂಗವನ್ನು ಮಾಡುವ ಸಾಧ್ಯತೆಗಳಿವೆ.

RELATED ARTICLES  ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವು

ವಿಜೇತ ಅಭ್ಯರ್ಥಿಗಳು ಹಾಗೂ ಪರಾಜಿತ ಅಭ್ಯರ್ಥಿಗಳ ಬೆಂಬಲಿಗರ ನಡುವೆ ಘರ್ಷಣೆಗಳಾಗುವ ಸಾಧ್ಯತೆಗಳು ಇದ್ದು, ಸಾರ್ವಜನಿಕ ಆಸ್ತಿ ಪಾಸ್ತಿಗೆ ಧಕ್ಕೆ ಉಂಟಾಗುವ ಹಾಗೂ ಶಾಂತಿ ಭಂಗವಾಗುವ ಸಂಭವಗಳಿರುವುದರಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತಾ ಕ್ರಮವಾಗಿ ಜಿಲ್ಲೆಯಾದ್ಯಂತ 144 ನಿಷೇದಾಜ್ಞೆ ಹೊರಡಿಸುವಂತೆ ಪೊಲೀಸ್ ಅಧೀಕ್ಷಕರು ಪ್ರಸ್ತಾವನೆ ಸಲ್ಲಿಸಿದ್ದರು. .

ಈ ನಿಷೇಧಾಜ್ಞೆಯ ಅವಧಿಯಲ್ಲಿ ಸಾರ್ವಜನಿಕರು ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಮತ ಎಣಿಕೆ ಕೇಂದ್ರದ ಆವರಣವನ್ನು ಹೊರತುಪಡಿಸಿ ಸಾರ್ವಜನಿಕ ರಸ್ತೆ, ಬೀದಿ, ಓಣಿ, ಕೇರಿಗಳಲ್ಲಿ ಸಾರ್ವಜನಿಕ ಸ್ಥಳ, ಸಾರ್ವಜನಿಕ ಕಟ್ಟಡ ಮತ್ತು ಸರ್ಕಾರಿ ಕಚೇರಿಯ ಸುತ್ತಮುತ್ತ ಗುಂಪು ಸೇರುವುದು ಹಾಗೂ ಗುಂಪು ಸೇರುವಂತಿಲ್ಲ.

RELATED ARTICLES  ಉತ್ತರ ಕನ್ನಡ ಜಿಲ್ಲೆಗೆ ಸುಸಜ್ಜಿತ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆ ಅವಶ್ಯಕತೆ: ಅಭಿಯಾನಕ್ಕೆ ಬೆಂಬಲ‌ ಸೂಚಿಸಿದ ಶಾಸಕ ಸುನೀಲ್ ನಾಯ್ಕ.

ಯಾವುದೇ ಆಯುಧ, ಕುಡಗೋಲು, ಖಡ್ಗ , ಬರ್ಟಿ ಕಲ್ಲು , ಚೂರಿ, ಡೊಣ್ಣೆ ಲಾರಿ, ಅಥವಾ ದೈಹಿಕ ದುಡನೆ ಕಾರಣವಾಗುವ ಇನ್ನಾವುದೇ ವಸ್ತುಗಳನ್ನು ಹೊಂದುವುದು ಅಥವಾ ಹಿಡಿದು ಓಡಾಡುವಂತಿಲ್ಲ.

ಯಾವುದೇ ರೀತಿಯ ವಿಜಯೋತ್ಸವ, ಕರಾಳೋತ್ಸವ ಸಾರ್ವಜನಿಕ ಮೆರವಣಿಗೆ, ಪ್ರತಿಭಟನೆ ಸಾರ್ವಜನಿಕ ರಾಜಕೀಯ ಸಭೆ ನಡೆಸುವಂತಿಲ್ಲ. ಮೇ 23ರಂದು ಮತ ಎಣಿಕೆ ಕಾರ್ಯ ಸಮಯದಲ್ಲಿ ಜಿಲ್ಲೆಯಾದ್ಯಂತ ತಾಲೂಕು ಕೇಂದ್ರದಲ್ಲಿ ಬೆಂಬಲಿಗರನ್ನು ಸೇರಿಸುವುದು ನಿಷೇಧವಿದೆ. ಮೇ 22 ರಾತ್ರಿ 12ರಿಂದ ಮೇ 24ರ ಮಧ್ಯರಾತ್ರಿ 12ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿದ್ದು ಇದು ಸರಕಾರ ನಡೆಸುವ ಯಾವುದೇ ಕಾರ್ಯಕ್ರಮ ಸಭೆ ಸಮಾರಂಭಗಳಿಗೆ ಅನ್ವಯಿಸುವುದಿಲ್ಲ.