ಶಿರಸಿ: ಮಹಾತ್ಮಾ ಗಾಂಧೀಜಿಯವರ ಕುರಿತಾಗಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆಯವರು ಮಾಡಿದ್ದ ಟ್ವೀಟ್ ಈಗ ಸುದ್ದಿಮಾಡುತ್ತಿದೆ. ಕೇಂದ್ರ ಸಚಿವರು ಟ್ವಿಟ್ಟರ್ ಹ್ಯಾಕ್ ಆಗಿತ್ತೆಂದು ಸಮರ್ಥಿಸಿದರಾದರೂ ಈ ವಿಷಯದ ಕುರಿತಾಗಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆಗೆ ಮುಂದಾಗಿದೆ.
ಕೇಂದ್ರ ಸಚಿವ ಅನಂತಕುಮಾರ ಹೆಗಡೆಯವರು ಮಾಡಿದ್ದ ಟ್ವೀಟ್ ವಿರುದ್ಧ ಜಿಲ್ಲಾ ಕಾಂಗ್ರೆಸ್‌ನಿಂದ ಮೇ.20 ರಂದು ಪ್ರತಿಭಟನೆ ಕರೆಯಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೇ.20 ಬೆಳಿಗ್ಗೆ 10:30ಗಂಟೆಗೆ ಶಿರಸಿ ನಗರದ ಬಿಡ್ಕಿಬೈಲಿನಲ್ಲಿರುವ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನಂತರ ಬಸ್ ಸ್ಟ್ಯಾಂಡ್ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಪಕ್ಷದ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು,ಜನಪ್ರತಿನಿಧಿಗಳು, ಅಭಿಮಾನಿಗಳು ಭಾಗವಹಿಸಬೇಕೆಂದು ತಿಳಿಸಿದ್ದಾರೆ.