ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿದ್ದು ಇದರ ನೈತಿಕ ಹೊಣೆ ಹೊತ್ತು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಲು ರಾಹುಲ್ ಗಾಂಧಿ ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದರೂ ಅಮೇಥಿಯಲ್ಲಿ ಸ್ಮೃತಿ ಇರಾನಿ ವಿರುದ್ಧ ಸೋಲು ಕಂಡಿದ್ದಾರೆ. ಅಲ್ಲದೆ ದೇಶಾದ್ಯಂತ ಕಾಂಗ್ರೆಸ್ ಹೀನಾಯ ಪ್ರದರ್ಶನ ನೀಡಿದ್ದರಿಂದ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡುವುದಾಗಿ ಕಾಂಗ್ರೆಸ್ ಹಿರಿಯ ಮುಖಂಡರು ಹಾಗೂ ತಾಯಿ ಸೋನಿಯಾ ಗಾಂಧಿ ಮುಂದೆ ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ಹೇಳಾಗುತ್ತಿದೆ.
2019ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಒಟ್ಟಾರೆ 349 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದೆ. ಇನ್ನು ಬಿಜೆಪಿಯೇ ಒಟ್ಟಾರೆ 303 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಇನ್ನು ಕಾಂಗ್ರೆಸ್ ಒಟ್ಟಾರೆ 52 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ
Source: KP News