ಕಾರವಾರ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕೆನರಾ ಲೋಕಸಭಾ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಅಸ್ನೋಟಿಕರ್ ಬಿಜೆಪಿ ಅಭ್ಯರ್ಥಿ ಅನಂತ್‍ಕುಮಾರ್ ಹೆಗಡೆ ಅವರ ವಿರುದ್ದ ಸೋಲು ಅನುಭವಿಸಿದ್ದು ಇದೀಗ ಸೋಲಿನ ಪರಾಮರ್ಶನ ನಡೆಸುತ್ತಿದ್ದಾರೆ.
ಚುನಾವಣೆಯಲ್ಲಿ ಸೋಲಲು ಶನಿದೋಷ ಕಾರಣ. ಈ ದೋಷವನ್ನು ಪರಿಹಾರ ಮಾಡಿಕೊಳ್ಳಲು 50 ಲಕ್ಷ ರೂ. ಮೌಲ್ಯದ ನೀಲಮಣಿ ಹರಳನ್ನು ಧರಿಸಿರುವುದು ಇದೀಗ ಸುದ್ದಿಯಾಗುತ್ತಿದೆ.
50 ಲಕ್ಷ ಹಣ ಕೊಟ್ಟು ಅಪರೂಪದ ನೀಲಮಣಿ ಹರಳನ್ನು ತರಿಸಿ ಎಡಗೈನ ಮಧ್ಯ ಬೆರಳಿಗೆ ಆನಂದ್ ಅಸ್ನೋಟಿಕರ್ ಧರಿಸಿದ್ದಾರೆ ಎನ್ನಲಾಗಿದೆ. ಕೈ ಬೆರಳಿನಲ್ಲಿ ಇರುವ ಎಲ್ಲಾ ಉಂಗುರವನ್ನು ತೆಗೆದು ಲಕ್ಷ ಲಕ್ಷ ಖರ್ಚು ಮಾಡಿ ತಂದ ವಿಶೇಷ ಹರಳಿನ ಉಂಗುರವನ್ನು ಮಾತ್ರ ಧರಿಸಿದ್ದಾರಂತೆ ಆನಂದ್.